ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಪ್ಪುಂದ: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಪ್ಪುಂದ ಶಂಕರನಾರಾಯಣ ಪುರಾಣಿಕ ಇವರ ಪ್ರಾಯೋಜಕತ್ವದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸುಪ್ರಭಾತ ಮತ್ತು ಭಕ್ತಿಗೀತೆಗಳನ್ನೊಳಗೊಂಡ ಧ್ವನಿಮುದ್ರಿಕೆ (ಸಿಡಿ) ಯನ್ನು ಶಾಸಕ ಕೆ. ಗೋಪಾಲ ಪೂಜಾರಿ ಲೋಕಾರ್ಪಣೆ ಮಾಡಿದರು.
ಯುವ ಸಂಗೀತ ನಿರ್ದೇಶಕ ಚಂದ್ರ ಬೈಂದೂರು ಇವರು ಈ ಧ್ವನಿಮುದ್ರಿಕೆಗೆ ಸಾಹಿತ್ಯ ಮತ್ತು ಸಂಗೀತವನ್ನು ಸಂಯೋಜಿಸಿ ಭಕ್ತಿಗೀತೆಗಳ ಗಾಯನವನ್ನೂ ಮಾಡಿದ್ದಾರೆ. ಶ್ರೀದೇವರ ಸುಪ್ರಭಾತವನ್ನು ಉಡುಪಿ ಕೃಷ್ಣ ಕಾರಂತ್ ಹಾಡಿದ್ದಾರೆ. ಈ ಸಂದರ್ಭ ದೇವಳದ ತಂತ್ರಿ ಕೆ. ಮಂಜುನಾಥ ಅಡಿಗ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಉಪ್ಪುಂದ ಗ್ರಾಪಂ ಅಧ್ಯಕ್ಷೆ ದುರ್ಗಮ್ಮ, ಜಿಪಂ ಸದಸ್ಯರಾದ ಸುರೇಶ ಬಟ್ವಾಡಿ, ಗೌರಿ ದೇವಾಡಿಗ, ತಾಪಂ ಸದಸ್ಯೆ ಪ್ರಮೀಳಾ ದೇವಾಡಿಗ ಮತ್ತಿತರರು ಇದ್ದರು.