ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕುಂದಾಪುರ ತಾಲೂಕು ಸಮಿತಿ ಮತ್ತು ಬೈಂದೂರು ತಗ್ಗರ್ಸೆ ಹಾಗೂ ಯಡ್ತರೆ ಗ್ರಾಮಗಳ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಬೈಂದೂರು ತಗ್ಗರ್ಸೆ ಹಾಗೂ ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡನಿವೇಶನ ರಹಿತರಿಂದ ಮನೆ ನಿವೇಶನ ಮಂಜೂರಾತಿ ಕೋರಿ ಅರ್ಜಿಗಳನ್ನು ಸ್ವೀಕರಿಸಲಾಯಿತು. ಬೈಂದೂರು ನಿವೇಶನ ರಹಿತರ ಹೋರಾಟ ಸಮಿತಿ ಸಂಚಾಲಕ ಗಣೇಶ ತೊಂಡೆಮಕ್ಕಿ ಅರ್ಜಿ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿದರು.
ಈ ಅರ್ಜಿಗಳನ್ನು ಯಡ್ತರೆ ಗ್ರಾಮ ಪಂಚಾಯತ್ ಕಛೇರಿಗೆ ಸೆ.೨೮ರಂದು ಬೆಳಿಗ್ಗೆ ೧೧ ಗಂಟೆಗೆ, ಹಾಗೂ ಬೈಂದೂರು, ತಗ್ಗರ್ಸೆ ಗ್ರಾಮ ಪಂಚಾಯತ್ ಕಛೇರಿಗೆ ಮಧ್ಯಾಹ್ನ ೩ ಗಂಟೆಗೆ ಸಾಮೂಹಿಕವಾಗಿ ಹಸ್ತಾಂತರಿಸಲಾಗುತ್ತದೆ. ಈ ಸಂದರ್ಭ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಕುಂದಾಪುರ ತಾಲೂಕು ಸಮಿತಿ ಕಾರ್ಯದರ್ಶಿ ನಾಗರತ್ನ ನಾಡ, ಮುಖಂಡರಾದ ರಾಜೀವ ಪಡುಕೋಣೆ, ಪದ್ಮಾವತಿ ಶೆಟ್ಟಿ, ಗಣೇಶ ಮೊಗವೀರ, ಸಮ್ಮದ್ ತೊಂಡೆಮಕ್ಕಿ, ರಮೇಶ ಮೊಗವೀರ, ನಾಗೇಂದ್ರ ಪೂಜಾರಿ, ದಿನಕರ ಪೂಜಾರಿ ಉದ್ದಬೆಟ್ಟು, ಗೋವಿಂದ ಪೂಜಾರಿ ಓಣಿಮನೆ, ಮಂಜುನಾಥ ಪೂಜಾರಿ, ಸಿದ್ದನಹಿತ್ಲು, ಜಯಲಕ್ಷ್ಮೀ ಯಡ್ತರೆ, ಜಟ್ಟಿ ಪೂಜಾರಿ ಯಡ್ತರೆ, ಥೋಮಸ್ ಡಯಾಸ್ ಯಡ್ತರೆ, ಕುಶಲ ಹಂಗಳೂರು, ಶ್ಯಾಮಲ ಗುಜ್ಜಾಡಿ ಉಪಸ್ಥಿತರಿದ್ದರು.