ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವವು ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ವೇದಮೂರ್ತಿ ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿವಿದಾನಗಳೊಂದಿಗೆ ಸಂಭ್ರಮ ಸಡಗರದಲ್ಲಿ ಜರುಗಿತು.
ಪ್ರತಿದಿನ ಭಜನೆ ವಿಶೇಷ ಪೂಜೆ, ಅಲಂಕಾರ ಸೇವೆ, ಚಂಡಿಕಾಯಾಗ, ರಂಗಪೂಜೆಗಳಲ್ಲಿ ಭಕ್ತಾದಿಗಳು ಪಾಲ್ಗೊಂಡರು. ದೇವಳದ ಅರ್ಚಕ ಗಣಪತಿ ಸುವರ್ಣ, ಉತ್ಸವ ಸಮಿತಿ ಗೌರವಾಧ್ಯಕ್ಷ ಸೀತಾರಾಮ ಹೇರಿಕುದ್ರು, ಅಧ್ಯಕ್ಷ ಪ್ರಕಾಶ್ ಕೆ.ಬಿ, ಶ್ರೀಧರ ಸುವರ್ಣ ಇನ್ನಿತರರು ಉಪಸ್ಥಿತರಿದ್ದರು.