ಕುಂದಾಪ್ರ ಡಾಟ್ ಕಾಂ ಸುದ್ದಿ.
ಪ್ರಸ್ತುತ ದಿನಗಳಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗದಂತಹ ವೈದ್ಯಪದ್ಧತಿಗಳಿಗೆ ಬೇಡಿಕೆ ಹೆಚ್ಚುತ್ತಿದ್ದು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಆಯುಷ್ ಜಿಲ್ಲಾ ಮುಖ್ಯಸ್ಥರಾದ ಡಾ. ಮಹಮ್ಮದ್ ಇಕ್ಬಾಲ್ ಹೇಳಿದರು.
ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 15ನೇ ಶೈಕ್ಷಣಿಕ ವರ್ಷಾರಂಭದ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತು ಪೆÇೀಷಕರನ್ನುದ್ದೇಶಿಸಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆವಹಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವನಿತಾಶೆಟ್ಟಿ ಉಪಸ್ಥಿತರಿದ್ದರು.
ಪ್ರಥಮ ವರ್ಷದಿಂದ ನಾಲ್ಕನೇ ವರ್ಷದವರೆಗೆ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶ್ವೇತಾ ನಾರಾಯಣ್ ಕಾರ್ಯಕ್ರಮ ನಿರ್ವಹಿಸಿದರು. ಅನಾಮಿಕ ವಂದಿಸಿದರು ಪ್ರಕೃತಿ ಚಿಕಿತ್ಸಾ ದಿನಾಚರಣೆ: ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಆಳ್ವಾಸ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಮೌಂಟ್ ರೋಜರಿ ಚಾರಿಟೇಬ್ಲ್ ಟ್ರಸ್ಟ್ ನ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿದರು.