ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರಾವಳಿ ಭಾಗದ ಧೀಮಂತ ಕಲೆ ಯಕ್ಷಗಾನದಲ್ಲಿ ನೂರಾರು ಕಲಾವಿದರು ತೊಡಗಿಸಿಕೊಂಡು ಕಲಾ ಸಂಪತ್ತನ್ನು ಶ್ರೀಮಂತಗೊಳಿಸಿದ್ದಾರೆ. ಆದರೆ ಅವರ ವೃದ್ದಾಪ್ಯದ ದಿನಗಳಲ್ಲಿ ಅವರಿಗೆ ಮಾಶಾಸನ ನೀಡಲು ಇಲಾಖೆ ವಿಳಂಬ ನೀತಿ ಅನುಸರಿಸುತ್ತಿರುವುದು ಗಮನಕ್ಕೆ ಬಂದಿದೆ. ಕಲಾವಿದರನ್ನು ಸತಾಯಿಸದೇ ಕೂಡಲೇ ಅವರಿಗೆ ಮಾಶಾಸನ ದೊರೆಯುವಂತೆ ನಿರ್ದೇಶಕರು ಕ್ರಮಕೈಗೊಳ್ಳಬೇಕಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಅವರು ಹೇಳಿದರು.
ಉಡುಪಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೈಂದೂರಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸೌರಭ ಸಾಂಸ್ಕೃತಿಕ ಕಾರ್ಯಕ್ರಮಗಳ್ನು ಉದ್ಘಾಟಿಸಿ ಮಾತನಾಡಿ ಬೈಂದೂರಿನಲ್ಲಿ ಹಲವಾರು ಕಲಾವಿದರು ಹಾಗೂ ಕಲಾ ಸಂಸ್ಥೆಗಳಿದ್ದು ನಿರಂತರವಾಗಿ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತಲೇ ಇರುವುದು ಸಂತಸದ ಸಂಗತಿ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ್ ಬಟ್ವಾಡಿ, ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯೆ ಸುಜಾತ ದೇವಾಡಿಗ, ಯಡ್ತರೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸಂಜೀವ ನಾಯ್ಕ್, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಧ್ಯಾಯ ರವೀಂದ್ರ ಶ್ಯಾನುಭೋಗ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶ್ಯಾನುಭೋಗ್ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಹಾದೇವಯ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಲಾಖಾ ಸಿಬ್ಬಂಧಿ ಪೂರ್ಣಿಮಾ ವಂದಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.