ವಲಯ ಮಟ್ಟದ ಸಾಕ್ಷರತೆ ಕುರಿತ ಕಾರ್ಯಾಗಾರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಅಕ್ಷರಜ್ಞಾನ ಅತ್ಯವಶ್ಯಕ. ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದ್ದು, ಹಳ್ಳಿಗಳಲ್ಲಿ ಇಂದಿಗೂ ಅನೇಕ ಮಂದಿ ಅನಕ್ಷರಸ್ಥರಿದ್ದಾರೆ. ಆದ್ದರಿಂದ ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ಸಾಕ್ಷರತೆಯನ್ನು ಹೆಚ್ಚಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ರೋಟರಿ ಸದಸ್ಯರು ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಕನಿಷ್ಠ ವಿದ್ಯಾಭ್ಯಾಸ ನೀಡುವಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಚುನಾಯಿತ ೨೦೧೮-೧೯ನೇ ಸಾಲಿನ ರೋಟರಿ ಜಿಲ್ಲಾ ರಾಜ್ಯಪಾಲ ಅಭಿನಂದನ ಎ.ಶೆಟ್ಟಿ ಹೇಳಿದರು.

Call us

Click Here

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ಒಳಾಂಗಣದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಆಶ್ರಯದಲ್ಲಿ ಜರಗಿದ ವಲಯ ಮಟ್ಟದ ಸಾಕ್ಷರತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರೋಟರಿ ವಲಯ-೨ರ ಮಾಜಿ ಅಸಿಸ್ಟೆಂಟ್ ಗವರ್ನರ್ ಅಶೋಕಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಜೋನಲ್ ಲೆಫ್ಟಿನೆಂಟ್ ಮನೋಜ್ ನಾಯರ್, ಜೋನಲ್ ಕೋ-ಆರ್ಡಿನೇಟರ್ (ಸಾಕ್ಷರತೆ) ವಾಸುದೇವ ಕಾರಂತ್ ಅತಿಥಿಗಳಾಗಿದ್ದರು.

ರೋಟರಿ ವಲಯ-೧ರ ಸಹಾಯಕ ಗವರ್ನರ್ ಕೃಷ್ಣ ಕಾಂಚನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಗಂಗೊಳ್ಳಿ ರೋಟರಿ ಕಾರ್ಯದರ್ಶಿ ಅಶೋಕ ದೇವಾಡಿಗ ವಂದಿಸಿದರು.

Leave a Reply