ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ, ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ, ಲಯನ್ಸ್ ಟ್ರಸ್ಟ್ ಫಾರ್ ಸರ್ವಿಸಸ್ & ಚಾರಿಟೇಸ್ (ರಿ.) ಲಯನ್ಸ್ ಕ್ಲಬ್ ಬ್ರಹ್ಮಾವರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಲಯನ್ಸ್ & ಲಯನೆಸ್ ಕ್ಲಬ್ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಜರಗಿತು.
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್, ಪ್ರಕಾಶ್ಚಂದ್ರ ಶೆಟ್ಟಿ ಇವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆಯುವಲ್ಲಿ ಯಶಸ್ವಿ ಹೊಂದಬೇಕು ಎಂದರು. ಶಿಬಿರವನ್ನು ಚಾಮರ್ಕಿ ನಾರಾಯಣ ಶೆಟ್ಟಿ ಕಣ್ಣಿನ ಆಸ್ಪತ್ರೆಯ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಆಸ್ಪತ್ರೆಯ ವೈದ್ಯರಾದ ಶ್ರೀಮತಿ ವೀಣಾ ಉಮೇಶ ಇವರು ಕಣ್ಣಿನ ರಕ್ಷಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದು ಕುಲಾಲ್ತಿ ಸಭೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ ಪೈ ಕಾರ್ಯಕ್ರಮವನ್ನು ಸ್ವಾಗತಿಸಿ, ವಂದಿಸಿದರು. ವಸೂಲಾತಿ ವ್ಯವಸ್ಥಾಪಕ ಕೆ. ಹಾವಳಿ ಬಿಲ್ಲವ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ ಕಾರ್ಯಕ್ರಮ ನಿರೂಪಿಸಿದರು. ಹಾಗೂ ಕಾಲ್ತೋಡು ಶಾಖಾ ವ್ಯವಸ್ಥಾಪಕ ಎಚ್. ರಾಮ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು. 102 ಶಿಬಿರಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.