Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಡ್ಲೂರಿನಲ್ಲಿ ಗೋಕಳ್ಳರ ಅಟ್ಟಹಾಸ: ಪೊಲೀಸ್ ಪೇದೆಗೆ ಗಾಯ. 11 ದನಗಳು ಮೃತ
    Recent post

    ಕಂಡ್ಲೂರಿನಲ್ಲಿ ಗೋಕಳ್ಳರ ಅಟ್ಟಹಾಸ: ಪೊಲೀಸ್ ಪೇದೆಗೆ ಗಾಯ. 11 ದನಗಳು ಮೃತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಗುಲ್ವಾಡಿಯಿಂದ ಕಂಡ್ಲೂರು ಕಡೆಗೆ ಅಕ್ರಮ ಗೋಸಾಗಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ತಡೆಯಲೆತ್ನಿಸಿದ ಸಂದರ್ಭ ಪೊಲೀಸ್ ಪೇದೆಯೋರ್ವ ಗಾಯಗೊಂಡ ಘಟನೆ ಕಂಡ್ಲೂರಿನಲ್ಲಿ ನಡೆದಿದೆ. ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೨೫ ದನಗಳ ಪೈಕಿ ೧೧ ದನಗಳು ಮೃತಪಟ್ಟಿವೆ.

    Click Here

    Call us

    Click Here

    ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ತಾಲೂಕಿನ ಗುಲ್ವಾಡಿ ಕಡೆಯಿಂದ ಬಸ್ರೂರು ಮೂಲಕ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಗುಲ್ವಾಡಿ ಸೇತುವೆ ಮೇಲೆ ವಾಹನವನ್ನು ಪೊಲೀಸರು ಅಡ್ಡ ಹಾಕಿದ್ದರು. ಆದರೆ ಅಲ್ಲಿ ವಾಹನ ನಿಲ್ಲಿಸದೇ ಪರಾರಿಯಾದ ಆರೋಪಿಗಳು ಬಸ್ರೂರು ಮೂಲಕ ಕಂಡ್ಲೂರು ಕಡೆಗೆ ತೆರಳಿದ್ದರು. ಕಂಡ್ಲೂರಿನಲ್ಲಿ ಗ್ರಾಮಾಂತರ ಪೊಲೀಸರು ಠಾಣೆ ಎದುರು ಸಿಬ್ಬಂದಿಗಳಾದ ಅಶೋಕ್ ಮತ್ತು ಪ್ರಶಾಂತ್ ನಾಗಣ್ಣ ಬ್ಯಾರಿಕೆಡ್ ಅಳವಡಿಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ಬರುವುದನ್ನೇ ಕಾಯುತ್ತಿದ್ದರು. ಆದರೆ ಅಲ್ಲಿಯೂ ವಾಹನವನ್ನು ನಿಲ್ಲಿಸದೇ ಬ್ಯಾರಿಕೇಡ್‌ಗೆ ಗುದ್ದಿ ಆರೋಪಿಗಳು ಮುಂದುವರಿದಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ವಾಹನ ಗುದ್ದಿದ್ದ ರಭಸಕ್ಕೆ ಬ್ಯಾರಿಕೇಡ್ ಪೊಲೀಸ್ ಸಿಬ್ಬಂದಿ ಪ್ರಶಾಂತ್ ನಾಗಣ್ಣ ಅವರ ಕಾಲಿನ ಮೇಲೆ ಬಿದ್ದು, ಮಂಡಿ ಚಿಪ್ಪಿಗೆ ತೀವ್ರ ಪ್ರಮಾಣದ ಗಾಯವಾಗಿದೆ. ಪ್ರಶಾಂತ್ ನಾಗಣ್ಣ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಆರೋಪಿಗಳು ಸಾಗುತ್ತಿದ್ದ ವಾಹನವನ್ನು ಹಿಂಬಾಲಿಸಿದ ಪೊಲೀಸರು ಕೊನೆಗೂ ಸೇತುವೆ ಸಮೀಪ ವಾಹನವನ್ನು ಅಡ್ಡಗಟ್ಟಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    16 − 11 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.