Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕೀಳು ಪದ ಬಳಕೆ: ಸಚಿವ ರೋಷನ್ ಬೇಗ್ ವಿರುದ್ದ ಪ್ರತಿಭಟನೆ
    ಊರ್ಮನೆ ಸಮಾಚಾರ

    ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕೀಳು ಪದ ಬಳಕೆ: ಸಚಿವ ರೋಷನ್ ಬೇಗ್ ವಿರುದ್ದ ಪ್ರತಿಭಟನೆ

    Updated:18/10/2017No Comments
    Facebook Twitter Pinterest LinkedIn WhatsApp Reddit Tumblr Email
    ?
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸಾರ್ವಜನಿಕ ಸಮಾರಂಭದಲ್ಲಿ ಅವಹೇಳನಕಾರಿ, ಅಸಾಂವಿಧಾನಿಕ ಹಾಗೂ ಕೀಳು ಮಟ್ಟದ ಪದಗಳನ್ನು ಬಳಸಿ ನಿಂದಿಸಿದ ರಾಜ್ಯದ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಗಂಗೊಳ್ಳಿಯ ಮ್ಯಾಂಗನೀಸ್ ರೋಡ್ ಬಸ್ ನಿಲ್ದಾಣದ ಬಳಿಯಲ್ಲಿ ಸಂಜೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಇಡೀ ವಿಶ್ವವೇ ಗುರುತಿಸಿದ ಹಾಗೂ ಭಾರತ ದೇಶವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗುವಂತೆ ಮಾಡಿದ ಈ ದೇಶ ಕಂಡ ಮಹಾನ್ ನಾಯಕ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಮಾತನಾಡಿರುವುದು ಸಚಿವರಿಗೆ ಶೋಭೆ ತರವಂತದ್ದಲ್ಲ. ಇದು ಅವರ ವಿಕೃತ ಮನಸ್ಸು ಹಾಗೂ ಕೀಳು ಸಂಸ್ಕೃತಿಯನ್ನು ತೋರಿಸುತ್ತದೆ. ಅಲ್ಪಸಂಖ್ಯಾತರನ್ನು ಓಲೈಸಿ ಓಟು ಗಿಟ್ಟಿಸಿಕೊಳ್ಳಲು ಸಿದ್ಧರಾಮಯ್ಯನವರು ರೋಷನ್ ಬೇಗ್ ಅವರನ್ನು ಸಚಿವರನ್ನಾಗಿ ಮಾಡಿಕೊಂಡಿದ್ದು, ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವ ಯೋಗ್ಯತೆ ಅವರಿಗಿಲ್ಲ. ಇಡೀ ವಿಶ್ವವೇ ನರೇಂದ್ರ ಮೋದಿ ಹಾಗೂ ಅವರ ಸಾಧನೆಯನ್ನು ಕೊಂಡಾಡುತ್ತಿರುವಾಗ ಸಚಿವ ರೋಷನ್ ಬೇಗ್ ಸಭ್ಯತೆಯನ್ನು ಮೀರಿ ಪ್ರಧಾನ ಮಂತ್ರಿಯವರನ್ನು ಅವ್ಯಾಚ ಶಬ್ದಗಳಿಂದ ಬೈಯ್ದು ನಿಂದಿಸಿರುವುದನ್ನು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ತೀವ್ರವಾಗಿ ಖಂಡಿಸುತ್ತಿದ್ದು, ಸಚಿವ ರೊಷನ್ ಬೇಗ್ ಬಹಿರಂಗವಾಗಿ ಸಾರ್ವಜನಿಕರ ಕ್ಷಮೆಯಾಚಿಸಬೇಕು ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, ಮುಂಬರುವ ಚುನಾವಣೆಯಲ್ಲಿ ಜನರೇ ಅವರನ್ನು ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ತಾಪಂ ಸದಸ್ಯ ಸುರೇಂದ್ರ ಖಾರ್ವಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇವಲ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ದೇಶಕ್ಕಾಗಿ ಹಗಲಿರುಳು ದುಡಿಯುತ್ತಿರುವ ಇಡೀ ವಿಶ್ವವೇ ಭಾರತ ದೇಶವನ್ನು ನೋಡುವಂತೆ ಮಾಡುತ್ತಾ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಪ್ರಧಾನ ಮಂತ್ರಿಯವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಚಿವ ರೋಷನ್ ಬೇಗ್ ಅವರಿಗೆ ಸಚಿವರಾಗಿ ಮುಂದುವರಿಯುವ ಹಕ್ಕಿಲ್ಲ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರೋಷನ್ ಬೇಗ್ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿದರು.

    ಗಂಗೊಳ್ಳಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಜಯರಾಮ ದೇವಾಡಿಗ, ಕಾರ್ಯದರ್ಶಿ ಬಿ.ಗಣೇಶ ಶೆಣೈ, ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ ಮೇಸ್ತ, ಬಿಜೆಪಿ ಬೈಂದೂರು ಕ್ಷೇತ್ರ ಸಮಿತಿ ಸದಸ್ಯ ರಾಮಪ್ಪ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯರಾದ ಗೋಪಾಲ ಖಾರ್ವಿ ದಾವನಮನೆ, ಬಿ.ಲಕ್ಷ್ಮೀಕಾಂತ ಮಡಿವಾಳ, ಸುಧಾಕರ ಖಾರ್ವಿ, ಪಕ್ಷದ ಮುಖಂಡರಾದ ಮೋಹನ ಗುಜ್ಜಾಡಿ, ಅಶೋಕ ಪೂಜಾರಿ, ಗಣೇಶ ಶೇರುಗಾರ್, ವಾಸುದೇವ ದೇವಾಡಿಗ, ಶ್ರೀಧರ ನಾಯ್ಕ್, ಮೋಹನ ಖಾರ್ವಿ, ರಾಘವೇಂದ್ರ ಗಾಣಿಗ, ಎಸ್.ರಾಘವೇಂದ್ರ, ಗಂಗಾಧರ ಖಾರ್ವಿ ಲೈಟ್‌ಹೌಸ್, ಪ್ರಕಾಶ ಖಾರ್ವಿ, ನವೀನ ದೊಡ್ಡಹಿತ್ಲು, ಯಶವಂತ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    19 − 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.