ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಅವಿಸ್ಮರಣೀಯ: ಜಿ. ಎನ್ ಪ್ರಕಾಶ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ರೋಟರಿ ಸಂಸ್ಥೆಯು ಕಳೆದ ಹಲವು ದಶಕಗಳಿಂದ ಸಾಮಾಜಿಕ ಚಳವಳಿಯಲ್ಲಿ ತೊಡಗಿಕೊಳ್ಳುವ ಮೂಲಕ ಅನೇಕ ಉತ್ತಮ ಕಾರ್ಯಗಳನ್ನು ಸಮಾಜಕ್ಕೆ ನೀಡಿದೆ. ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಪಾತ್ರ ಅವಿಸ್ಮರಣೀಯ. ಶೈಕ್ಷಣಿಕ ಕ್ಷೇತ್ರದಲ್ಲಿ ಕೂಡ ರೋಟರಿ ಸಂಸ್ಥೆಯ ಸದಸ್ಯರು ತೊಡಗಿಸಿಕೊಂಡು ಅನಕ್ಷರತೆಯನ್ನು ತೊಡೆದುಹಾಕುವಲ್ಲಿ ಶ್ರಮಿಸುತ್ತಿದ್ದಾರೆ. ವಿಶ್ವದ ಎಲ್ಲಾ ದೇಶಗಳಲ್ಲಿ ರೋಟರಿ ಸಂಸ್ಥೆ ತನ್ನ ಜಾಲವನ್ನು ಹೊಂದಿದ್ದು, ರೋಟರಿ ಮೂಲಕ ಸ್ನೇಹ ವಿಶ್ವಾಸ ವೃದ್ಧಿಯಾಗುತ್ತದೆ ಎಂದು ರೋಟರಿ ಜಿಲ್ಲೆ ೩೧೮೨ರ ಗವರ್ನರ್ ಜಿ.ಎನ್.ಪ್ರಕಾಶ್ ಹೇಳಿದರು.

Call us

Click Here

ಅವರು ಗಂಗೊಳ್ಳಿ ರೋಟರಿ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಸಂಜೆ ಜರಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಂಗೊಳ್ಳಿ ರೋಟರಿ ಸಂಸ್ಥೆಯ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮಾಜ ಉನ್ನತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಶಾಲೆಗೆ ದಾನಿಗಳ ಸಹಕಾರದೊಂದಿಗೆ ಕಂಪ್ಯೂಟರ್ ಮತ್ತಿತರ ಸಾಧನಗಳನ್ನು ಒದಗಿಸಲು ಮುಂದಾಗಿರುವುದು ಅಭಿನಂದನೀಯ ಎಂದರು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯ೧ರ ಸಹಾಯಕ ಗವರ್ನರ್ ಕೆ.ಕೃಷ್ಣ ಕಾಂಚನ್, ಜೋನಲ್ ಲೆಫ್ಟಿನೆಂಟ್ ಮನೋಜ್ ನಾಯರ್ ಶುಭ ಹಾರೈಸಿದರು. ಇದೇ ಸಂದರ್ಭ ಹಕ್ಲಾಡಿ ಕೆ.ಎಸ್.ಎಸ್. ಸರ್ಕಾರಿ ಪ್ರೌಢಶಾಲೆ ಮತ್ತು ಕುಂದಾಪುರದ ಸೈಂಟ್ ಜೋಸೆಫ್ ಶಾಲೆಯ ಗ್ರಂಥಾಲಯಗಳಿಗೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ೧೦ ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ವಿಜಯಾ ಪ್ರಕಾಶ್ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ದುರ್ಗರಾಜ್ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಅಶೋಕ ದೇವಾಡಿಗ ವರದಿ ವಾಚಿಸಿ ವಂದಿಸಿದರು. ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

 

Click here

Click here

Click here

Click Here

Call us

Call us

Leave a Reply