ಹೊರನಾಡ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ವರದಿ.
ಕುಂದಾಪುರ: ಪ್ರಸಕ್ತ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬೈಂದೂರಿನ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಭಾಜನರಾಗಿದ್ದಾರೆ. ಪ್ರಸ್ತುತ ಕತಾರಿನಲ್ಲಿ ನೆಲೆಸಿರುವ ಸುಬ್ರಹ್ಮಣ್ಯ ಅವರು ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಲಾಗುತ್ತಿರುವ ಸೇವೆಯನ್ನು ಗುರುತಿಸಿ ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

Call us

Click Here

ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಕತಾರ್‌ನಲ್ಲಿ ಪಸರಿಸುತ್ತಿರುವ ಸುಬ್ರಹ್ಮಣ್ಯ ಅವರು ಕತಾರ್ ಕರ್ನಾಟಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕತಾರ್ ಕರ್ನಾಟಕ ಸಂಘದ ಮೂಲಕ ಹತ್ತಾರು ಕನ್ನಡಪರ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

೨೦೧೩-೧೫ನೇ ಸಾಲಿನಲ್ಲಿ ಕರ್ನಾಟಕ ಸಂಘ ಕತಾರಿನ ಸದಸ್ಯತ್ವ ನೋಂದಣಿ ಸಂಚಾಲಕರಾಗಿ, ಕಾರ್ಯಕಾರಣಿ ಸಮಿತಿಯ ಖಜಾಂಜಿಯಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ಕ್ರೀಯಾಶೀಲ ವ್ಯಕ್ತಿತ್ವ, ಸಮಾಜ ಸೇವೆಯಡೆಗಿನ ನಿರಂತರ ತುಡಿತ ಹಾಗೂ ಅತ್ಯುತ್ತಮ ಸಂಘಟನಾ ಕೌಶಲ್ಯದಿಂದ ಸುಬ್ರಹ್ಮಣ್ಯ ಎಲ್ಲರ ಮೆಚ್ಚುಗೆಗೆ ಪಾತ್ರರಾದವರು. ಕತಾರ್ ಕರ್ನಾಟಕ ಸಂಘಕ್ಕೆ ಕನ್ನಡಿಗರನ್ನು ಸದಸ್ಯರನ್ನಾಗಿ ಸೇರಿಸುವಲ್ಲಿ ಹಾಗೂ ಈ ಭಾಗದಲ್ಲಿ ವಿವಿಧ ಸಂಘಟನೆಗಳ ಮೂಲಕ ನಿರಂತರವಾಗಿ ಅತ್ಯುತ್ತಮ ಕಾರ್ಯಕ್ರಮ ಹಾಗೂ ವಿವಿಧ ಸಮಾಜ ಸೇವಾ ಚಟುವಟಿಕೆಗಳನ್ನು ಆಯೋಜಿಸುವಲ್ಲಿಯೂ ಅವರು ಯಶಕಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಬೈಂದೂರು ತಗ್ಗರ್ಸೆಯ ಹೆಬ್ಬಾಗಿಲು ಮನೆ ಗುರುದತ್ತ ಶೇರುಗಾರ್ ಹಾಗೂ ಮುಕಾಂಬು ದಂಪತಿಗಳ ಹಿರಿಯ ಪುತ್ರರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಮಯ್ಯಾಡಿ, ಬೈಂದೂರಿನಲ್ಲಿ ವಿದ್ಯಾಭ್ಯಾಸ ಪೂರೈಸಿ, ದಾವಣಗೆರೆಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಉದ್ಯೋಗಕ್ಕಾಗಿ ಕತಾರ್‌ನಲ್ಲಿ ತೆರಳಿದವರು. ಅಲ್ಲಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿ ಪತ್ನಿ ವನಿತಾ ಸುಬ್ರಹ್ಮಣ್ಯ ಹಾಗೂ ಪುತ್ರ ಪ್ರಥ್ವಿಕ್ ಅವರೊಂದಿಗೆ ಕತಾರಿನಲ್ಲಿ ನೆಲೆಸಿರುವ ಸುಬ್ರಹ್ಮಣ್ಯ ತಮ್ಮ ಸ್ನೇಹಮಯಿ ವ್ಯಕ್ತಿತ್ವ, ಕ್ರೀಯಾಲತೆ ಹಾಗೂ ಬದ್ಧತೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದವರು. ಕುಂದಾಪ್ರ ಡಾಟ್ ಕಾಂ ಸುದ್ದಿ /

Leave a Reply