ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ರೋಟರಿ ಕ್ಲಬ್ ಬೈಂದೂರು ಹಾಗೂ ಸುರಭಿ ರಿ. ಬೈಂದೂರು ಸಂಸ್ಥೆಯ ನೃತ್ಯ ಸುರಭಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ೫ ದಿನಗಳ ಶಾಸ್ತ್ರೀಯ ಭರತನಾಟ್ಯ ಕಾರ್ಯಾಗಾರವನ್ನು ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಜಾತಿ ಮತಗಳನ್ನು ಮೀರಿ ನಿಂತಿರುವ ಕಲೆಯಲ್ಲಿ ಶಿಕ್ಷಣಕ್ಕೆ ಪೂರಕವಾದ ಮತ್ತು ಎಲ್ಲಾ ಹೃದಯಗಳನ್ನು ಸ್ವರ್ಶಿಸುವ ಗುಣವಿದೆ ಎಂದರು.
ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಹುಂಚನಿ ಕೃಷ್ಣಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನೃತ್ಯಗುರು ವಿದ್ವಾನ್ ಚಂದ್ರಶೇಖರ ನಾವಡ, ಸುರಭಿ ಬೈಂದೂರು ಅಧ್ಯಕ್ಷ ಶಿವರಾಮ ಕೊಠಾರಿ ಉಪಸ್ಥಿತರಿದ್ದರು. ಸುರಭಿಯ ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ಲಕ್ಷ್ಮಣ ಕೊರಗ ವಂದಿಸಿದರು. ನಿರ್ದೇಶಕ ಸುಧಾಕರ ಪಿ. ಬೈಂದೂರು ನಿರೂಪಿಸಿದರು.