ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 64ನೇ ಅಖಿಲ ಭಾರತ ಸಹಕಾರ ಸಪ್ತಾಹ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ, ಕಳೆದ 23 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಅಪೂರ್ವ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ರಾಜ್ಯ ಮಟ್ಟದ ’ಉತ್ತಮ ಸಹಕಾರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಾಗಲಕೋಟೆಯ ಕಲಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಪತ್ತಿನ ಮಹಾಮಂಡಲ ಬೆಂಗಳೂರು ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮಾಜಿ ಸಚಿವ ಹೆಚ್. ವೈ ಮೇಟಿ ಅವರು ಉತ್ತಮ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಿದರು. ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಜೆಯ ಕುಮಾರ್ ಸರ್ ನಾಯಕ್, ಕರ್ನಾಟಕ ರಾಜ್ಯ ಸಹಕಾರಿ ಪತ್ತಿನ ಸಂಘಗಳ ಮಹಾಮಂಡಲದ ಅಧ್ಯಕ್ಷ ಸಿ.ಎಂ ಮರೇಗೌಡ, ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿ. ಅಧ್ಯಕ್ಷ ಡಾ ಶೇಖರ ಗೌಡ ಮಾಲಿ ಪಾಟೀಲ, ಕರ್ನಾಟಕ ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಮಹಾಮಂಡಲ ಅಧ್ಯಕ್ಷ ಬಸವರಾಜ ಆರ್. ಬಾಳೆಕುಂದರಗಿ, ಕರ್ನಾಟಕ ರಾಜ್ಯ ಸಹಕಾರಿ ಬ್ಯಾಂಕುಗಳ ಮಹಾಮಂಡಲದ ಡಿ.ಟಿ ಪಾಟೀಲ್, ಬಾಗಲಕೋಟೆ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಂಗಣ್ಣ ಹಂಡಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.