ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ

Click Here

Call us

Call us

Call us

ಕುಂದಾಪುರ: ಪ್ರತಿಯೊಂದು ವಿಚಾರದಲ್ಲಿಯೂ ಪ್ರಾಮಾಣಿಕರಾಗಿ, ಮಾಡುವ ಕೆಲಸದಲ್ಲಿ ನಿಷ್ಠರಾಗಿ ಸಮಾಜಕ್ಕೆ ಕೀರ್ತಿ ತರುವಂತಹ ಕೆಲಸ ಯುವ ಸಮುದಾಯದಿಂದ ಆಗಬೇಕಿದೆ. ಬದುಕಿನ ಹಾದಿಯಲ್ಲಿ ಪ್ರಾಮಾಣಿಕತೆಯಿಂದ ಮುನ್ನಡೆದಾಗ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಹೇಳಿದರು.

Call us

Click Here

ಅವರು ಬೆಳಿಗ್ಗೆ ಭಂಡಾರ್‌ಕಾರ್ಸ್ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಹಾಗೂ ಕುಂದಾಪುರ ತಾಲೂಕು ಯುವಜನ ಒಕ್ಕೂಟದ ಆಶ್ರಯದಲ್ಲಿ ಕುಂದಾಪುರ ಹೆಚ್.ಪಿಯ ಎಂಫಸಿಸ್ ಕ್ಯಾಂಪಸ್ ರಿಕ್ರ್ಯೂಟ್‌ಮೆಂಟ್ ಡ್ರೈವ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಂಫಸಿಸ್ ಸೀನಿಯರ್ ಮೆನೇಜರ್ ಚಂದ್ರಶೇಖರ್, ಪ್ಲೇಸ್‌ಮೆಂಟ್ ಆಫೀಸರ್‌ಗಳಾದ ರಮೇಶ್, ಸುನೀಲ್ ಜೋಷಿ, ರಘುವೀರ್ ಎನ್.ಎಸ್, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸನ್ಮತ್ ಹೆಗ್ಡೆ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಕೆ.ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿದರು. ಕಾರ್ಯದರ್ಶಿ ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ ವಂದಿಸಿದರು.

Leave a Reply