ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಲಾವಿದರು ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸುವುದರೊಂದಿಗೆ ಹೊಸ ಪ್ರತಿಭೆಗಳಿಗೂ ಪ್ರೋತ್ಸಾಹಿಸುವುದು ಬಹುಮುಖ್ಯ. ತಾವು ಬೆಳೆಯುವುದರೊಂದಿಗೆ ತಮ್ಮೊಂದಿಗೆ ಇರುವವರನ್ನು ಗುರುತಿಸಿ ಅವರ ಬೆನ್ನು ತಟ್ಟುವ ಕೆಲಸ ಮಾಡಿದರೆ ಅವರೂ ಬೆಳೆಯುತ್ತಾರೆ ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಅವರು ಮಯ್ಯಾಡಿ ಧರ್ಮಸ್ಥಳ ಮಂಜುನಾಥೇಶ್ವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಸವಿ ಸವಿ ನೆನಪು ಕಲಾ ಸಂಸ್ಥೆಯ ಸಾವಿರ ಸಂಭ್ರಮ ಕಾರ್ಯಕ್ರಮದಲ್ಲಿ ಗಾನ ಯಕ್ಷಗಾನ ನಾಟ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯೋಪಧ್ಯಾಯ ಬಿ. ಹನುಮಂತ ಹಾಗೂ ಭಜನಾ ಕೀರ್ತನಕಾರ ರಾಜು ದೇವಾಡಿಗ ಚಪ್ಪರಮನೆ ಬಿಜೂರು ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ಹೊಬಳಿ ಅಧ್ಯಕ್ಷ ಗಣಪತಿ ಹೋಬಳಿದಾರ್, ಶಿರೂರು ಗ್ರಾಪಂ ಸದಸ್ಯ ರಘುರಾಮ ಪೂಜಾರಿ, ಉದ್ಯಮಿ ರಾಮ ಪೂಜಾರಿ, ಕುಂದಾಪುರ ಕಾರ್ಪೊರೇಷನ್ ಬ್ಯಾಂಕ್ ಪ್ರಬಂಧಕ ರಾಮಕೃಷ್ಣ ದೇವಾಡಿಗ, ಶಾಲೆಯ ಎಸ್‌ಡಿಎಂಸಿಯ ನಾಗಪ್ಪ ದೊಂಬೆ ಮೊದಲಾದವರು ಉಪಸ್ಥಿತರಿದ್ದರು. ಸವಿ ಸವಿ ನೆನಪು ಕಲಾ ಸಂಸ್ಥೆಯ ಅಧ್ಯಕ್ಷ ಸತೀಶ್ ರಾಮಕುಮಾರ್ ವರದಿ ವಾಚಿಸಿದರು. ದಯಾನಂದ ಕಾರ್ಯಕ್ರಮ ನಿರೂಪಿಸಿದರು.