ಇಂದಿರಾಗಾಂಧಿಯವರ ಜನಪರ ಕಾರ್ಯಕ್ರಮದಿಂದ ದೇಶದಲ್ಲಿ ಮಹತ್ತರ ಬದಲಾವಣೆ: ಶಾಸಕ ಗೋಪಾಲ ಪೂಜಾರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭೂಸುಧಾರಣೆ, ಇಪ್ಪತ್ತು ಅಂಶ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ, ಸೂರಿಲ್ಲದವರಿಗೆ ಸೂರು ಹೀಗೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ದೇಶದಲ್ಲಿ ಮಹತ್ತರವಾದ ಪರಿವರ್ತನೆಯನ್ನು ತಂದ ಕೀರ್ತಿ ಇಂದಿರಾಗಾಂಧಿಯವರಿಗೆ ಸಲ್ಲಬೇಕಿದೆ ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

Call us

Click Here

ಅವರು ಭಾನುವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಜನ್ಮ ಶತಾಬ್ದಿ ಅಂಗವಾಗಿ ಹಮ್ಮಿಕೊಂಡಿದ್ದ ದೀಪನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದಿರಾ ಗಾಂಧಿಯವರ ದೂರದೃಷ್ಠಿತ್ವದಿಂದ ದೇಶ ಸದೃಢವಾಗಿ ಬೆಳೆಯುತ್ತಿದೆ. ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ನೆನಪಿಸುವುದರೊಂದಿಗೆ ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯೋಣ ಎಂದವರು ಕರೆ ನೀಡಿದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್ ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಮೋರ್ಚಾ ಉಪಾಧ್ಯಕ್ಷ ಮಾರ್ಟಿನ್ ಡಯಾಸ್, ವಾಸುದೇವ ಯಡಿಯಾಳ್, ತಬ್ರೇಜ್ ನಾಗೂರು ಹಾಗೂ ಇತತರು ಉಪಸ್ಥಿತರಿದ್ದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್‌ಕುಮಾರ್ ಉಪ್ಪುಂದ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ನಾಗರಾಜ ಗಾಣಿಗ ಬಂಕೇಶ್ವರ ವಂದಿಸಿದರು.

Leave a Reply