ರಂಗಸುರಭಿ 2017 ನಾಟಕ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಗ್ರಾಮಾಂತರ ಪ್ರದೇಶಗಳಲ್ಲಿಯೇ ನಿಜವಾದ ಕಲೆ ಅರಳುತ್ತವೆ. ಕಲಾ ಕ್ಷೇತ್ರದಲ್ಲಿ ನೈಜ ಕೆಲಸವಾಗುತ್ತಿರುವುದು ಹಳ್ಳಿಗಳಲ್ಲಿಯೇ. ಮಾಡುವ ಕೆಲಸದಲ್ಲಿ ಪ್ರೀತಿ ಹಾಗೂ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಗುಣವಿದ್ದಲ್ಲಿ ಕಲೆ ಮತ್ತಷ್ಟು ಬೆಳೆಯುತ್ತದೆ ಎಂದು ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ. ತ ಚಿಕ್ಕಣ್ಣ ಹೇಳಿದರು.

Call us

Click Here

ಅವರು ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ಆಶ್ರಯದಲ್ಲಿ ನಡೆಯಲಿರುವ ರಂಗ ಸುರಭಿ 2017 ನಾಟಕ ಸಪ್ತಾಹದ ಆಮಂತ್ರಣ ಪತ್ರಿಕೆ ಹಾಗೂ ವಿಡಿಯೋ ಆಮಂತ್ರಣವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗಮಕಿ ಎಂ. ಆರ್. ಸತ್ಯನಾರಾಯಣ, ಬೈಂದೂರು ಸರಕಾರಿ ಮಾದರಿ ಶಾಲೆ ಮುಖ್ಯೋಪದ್ಯಾಯರಾದ ಜನಾರ್ದನ್,  ಸುರಭಿ ಬೈಂದೂರು ಅಧ್ಯಕ್ಷ ಶಿವರಾಮ ಕೊಠಾರಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ, ಸಲಹೆಗಾರರದ ಜಿ. ತಿಮ್ಮಪ್ಪಯ್ಯ ಮೊದಲಾದವರು ಉಪಸ್ಥಿತರಿದ್ದರು. ಯಸ್ಕೋರ್ಡ್ ಟ್ರಸ್ಟ್‌ನ ನಿರ್ದೇಶಕರಾದ ಸುಧಾಕರ ಪಿ. ಬೈಂದೂರು ಸ್ವಾಗತಿಸಿದರು, ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ವಂದಿಸಿದರು. ನಿರ್ದೇಶಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply