ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತಲ್ಲೂರು ರಾಷ್ಟೀಯ ಹೆದ್ದಾರಿ ೬೬ರಲ್ಲಿ ನಡೆದ ಖಾಸಗಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಗುಲ್ವಾಡಿ ಕೌಜೂರು ನಿವಾಸಿ ರಾಘವೇಂದ್ರ ಆಚಾರ್ ಮೃತ ದುರ್ದೈವಿ.
ಇಂದು ಬೆಳಿಗ್ಗೆ ರವೀಂದ್ರ ಆಚಾರ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ಢಿಕ್ಕಿಯಾಗಿತ್ತು. ಅಫಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸುಬ್ಬಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.