ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ದೇವಸ್ಥಾನದ ವಠಾರದಲ್ಲಿ ಕೊಂಚಾಡಿ ರಾಧಾ ಶೆಣೈ ವೇದಿಕೆಯಲ್ಲಿ ಶುಕ್ರವಾರ ಜರಗಿದ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ನಿವೃತ್ತ ಸೈನಿಕ ರಾಜೇಶ ಮೊಗವೀರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ರಾಜೇಶ ಮೊಗವೀರ ಅವರನ್ನು ಸನ್ಮಾನಿಸಿದರು. ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ಮಂಗಳೂರು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಪ್ರಶಾಂತ ಅಡಿಗ, ಕುಂದಾಪುರ ವಿದ್ಯಾರಂಗ ಮಿತ್ರ ಮಂಡಳಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ದಿನಕರ ಪಟೇಲ್, ಮುಂಬೈನ ಉದ್ಯಮಿ ರವಿ ಟಿ.ನಾಯ್ಕ್, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ರಮೇಶ ಕುಂದರ್, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ, ಕೃಷ್ಣ ಪೂಜಾರಿ ಹೆಮ್ಮಾಡಿಮನೆ, ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ ಕೋಟಾನ್, ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತ ಕೆ. ಶಾಲಾ ವಿದ್ಯಾರ್ಥಿ ನಾಯಕ ಶಶಿಕಾಂತ ಮತ್ತಿತರರು ಉಪಸ್ಥಿತರಿದ್ದರು.