ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಪ್ರತಿಭಾ ಕಾರಂಜಿಯ ಭಕ್ತಿಗೀತೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ರೇಯಾ ಖಾರ್ವಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಅವರು ಶ್ರೇಯಾ ಖಾರ್ವಿ ಅವರನ್ನು ಸನ್ಮಾನಿಸಿದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಬಿ.ಪ್ರಕಾಶ ಶೆಣೈ, ಸಹಶಿಕ್ಷಕರಾದ ಎನ್.ಸುಭಾಶ್ಚಂದ್ರ ನಾಯಕ್, ಜಿ.ವಿಶ್ವನಾಥ ಭಟ್, ನಾರಾಯಣ ಉಪಾಧ್ಯಾಯ, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ, ಸಹಶಿಕ್ಷಕಿಯರಾದ ಲಕ್ಷ್ಮೀ, ಮಾಲಾಶ್ರೀ, ರೇಖಾ ಖಾರ್ವಿ, ರೇಣುಕಾ ನಾಯಕ್, ನಾಗರಾಜ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ಸವಿತಾ ಯು.ದೇವಾಡಿಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ, ೧೨ನೇ ರಾಜ್ಯ ಮಟ್ಟದ ಐಡಿಯಲ್ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರಸನ್ನಾ ಪೈ, ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಹಿಳಾ ಮಂಡಳಿ ಅಧ್ಯಕ್ಷೆ ಸಖು ಉದಯ ಜಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳಕು ತಂಡದ ಸುಮಿತ್ರಾ, ಇಂದುಶ್ರೀ ಮಹಿಳಾ ಸಂಘದ ಅಧ್ಯಕ್ಷೆ ಸರ್ವಶ್ರೀ, ಕಾರ್ಯದರ್ಶಿ ನಾಗಿಣಿ ಮತ್ತಿತರರು ಉಪಸ್ಥಿತರಿದ್ದರು.