ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರಾಜ್ಯ ಮಟ್ಟದ ಉತ್ತಮ ಅಂಗನಾಡಿ ಕಾರ್ಯಕರ್ತೆ ಪ್ರಶಸ್ತಿ ವಿಜೇತ ಗಂಗೊಳ್ಳಿ ದಾಕುಹಿತ್ಲು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಅವರನ್ನು ಗಂಗೊಳ್ಳಿಯ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರಾದ ಯೂನಿಸ್ ಸಾಹೇಬ್, ಸಾಯಿರಾ ಬಾನು, ಸುಶೀಲ ಶೇರುಗಾರ್, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಪುಷ್ಪಾ, ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಅಧ್ಯಕ್ಷ ಶ್ರೀನಾಥ ರಾವ್, ಶಾಲೆಯ ಹಳೆ ವಿದ್ಯಾರ್ಥಿ ಶಿವಾನಂದ ಪೂಜಾರಿ, ತಾಲೂಕು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗರಾಜ್ ಪೂಜಾರಿ, ಶ್ರೀರಾಮ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರಾದ ಗೀತಾ ಸುನೇತ್ರ ಬಿಲ್ಲವ, ಶಾರದಾ ಗೋವಿಂದ ಪೂಜಾರಿ, ಸಿಆರ್‌ಪಿ ತಿಲೋತ್ತಮ, ಸಹಶಿಕ್ಷಕಿ ಪ್ರೇಮಲತಾ, ಗೌರವ ಶಿಕ್ಷಕಿ ವಿನಯಾ ಮತ್ತಿತರರು ಉಪಸ್ಥಿತರಿದ್ದರು.