ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ಭಾವನೆಯಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ: ವಿಜೇತ ಶೆಟ್ಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶ ಸಂಪದ್ಭರಿತ ದೇಶ. ಅತಿ ಹೆಚ್ಚು ಯುವಶಕ್ತಿಯನ್ನು ಹೊಂದಿರುವ ಅತೀ ಶ್ರೇಷ್ಠ ರಾಷ್ಟ್ರವಾಗಿರುವ ನಮ್ಮ ದೇಶದ ಸಂಸ್ಕೃತಿ ಅತ್ಯಂತ ಶ್ರೇಷ್ಠವಾಗಿದೆ. ಅನೇಕ ವಿಶಿಷ್ಟತೆಗಳನ್ನು ಹೊಂದಿರುವ ನಮ್ಮ ದೇಶದಲ್ಲಿ ಸ್ವಾಮಿ ವಿವೇಕಾನಂದರ ಸದೃಢ ವಿಚಾರಧಾರೆಗಳು ಆದರ್ಶಪ್ರಾಯ ವಿಚಾರಗಳು ಯುವಜನರಿಗೆ ಸ್ಫೂರ್ತಿ ನೀಡುತ್ತಿದೆ. ವಿವೇಕಾನಂದರ ಆದರ್ಶಗಳು ಯುವಜನತೆಯನ್ನು ಸೆಳೆಯುತ್ತಿದೆ ಎಂದು ಯುವ ಧಾರ್ಮಿಕ ಚಿಂತಕಿ ವಿಜೇತ ಶೆಟ್ಟಿ ಉಡುಪಿ ಹೇಳಿದರು.

Call us

Click Here

ಅವರು ಕ್ರಾಂತಿವೀರರ ಅಭಿಮಾನಿ ಬಳಗದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ೪ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗುರುವಾರ ಜರಗಿದ ವಿವೇಕ ಸ್ಮರಣೆ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ನಮ್ಮ ದೇಶದ ಪ್ರತಿಯೊಬ್ಬರಲ್ಲೂ ದೇಶಪ್ರೇಮ ಗಟ್ಟಿಯಾಗಿದೆ ಆದರೆ ಅದನ್ನು ಪ್ರಚುರಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ಭಯೋತ್ಪಾದನೆ ಮುಂತಾದವುಗಳು ಅಭಿವೃದ್ಧಿ ಮೇಲೆ ಬಹಳಷ್ಟು ಪರಿಣಾಮ ಬೀರುತ್ತಿದೆ. ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ಸದೃಢ ವಿಚಾರಗಳಿಂದ ಸದೃಢ ರಾಷ್ಟ್ರ ನಿರ್ಮಿಸಲು ಎಲ್ಲರನ್ನು ಒಟ್ಟುಗೂಡಿಸಲು ಸಾಧ್ಯವಿದೆ. ಶಿಕ್ಷಣದಲ್ಲಿ ನೈತಿಕ ಶಿಕ್ಷಣವನ್ನು ನೀಡುವಂತಾಗಬೇಕು. ಸ್ವಾಮಿ ವಿವೇಕಾನಂದರು ಹಿಂದು ಧರ್ಮದ ಶ್ರೇಷ್ಠತೆಯನ್ನು ಇಡೀ ವಿಶ್ವಕ್ಕೆ ಸಾರಿದವರು. ಸರ್ವಧರ್ಮಗಳಿಗೆ ಹಿಂದು ಧರ್ಮ ಸಮನ್ವಯವಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದರು. ಇಡೀ ವಿಶ್ವವೇ ಗೌರವಿಸುವಂತಹ ಮಹಾನ್ ನಾಯಕ ಸ್ವಾಮಿ ವಿವೇಕಾನಂದರ ಆದರ್ಶಗಳು ಎಲ್ಲರಲ್ಲೂ ಮೂಡಿಬರಬೇಕು ಎಂದು ಅವರು ಹೇಳಿದರು.

ಕುಂದಾಪುರ ಉದ್ಯಮಿ ಕೆ.ವಾಸುದೇವ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಶಿವಮೊಗ್ಗದ ಉದ್ಯಮಿ ವಿನೋದ ಕುಮಾರ್ ಗುಜ್ಜಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಗಿನ್ನೆಸ್ ದಾಖಲೆಯ ಯೋಗಪಟು ನಿರಂಜನ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೋಹನ ಪಿ.ಖಾರ್ವಿ ಶುಭ ಹಾರೈಸಿದರು. ಗಂಗೊಳ್ಳಿ ಉದ್ಯಮಿ ದಿನೇಶ ಪೂಜಾರಿ ಉಪಸ್ಥಿತರಿದ್ದರು.

ಚಂದ್ರಶೇಖರ ಸ್ವಾಗತಿಸಿದರು. ಅಕ್ಷಯ ದೊಡ್ಡಹಿತ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಗಂಗೊಳ್ಳಿಯ ಬಂದರು ಪೋರ್ಟ್ ಆಫೀಸಿನ ಬಳಿಯಿಂದ ಶ್ರೀ ಶಾರದಾ ಮಂಟಪದವರೆಗೆ ಬೃಹತ್ ಶೋಭಾಯಾತ್ರೆ ನಡೆಯಿತು.

 

Click here

Click here

Click here

Click Here

Call us

Call us

Leave a Reply