ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸಿಟಿ ಪಾಯಿಂಟ್‌ನಲ್ಲಿ ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸೋಮವಾರ ಉದ್ಘಾಟನೆಗೊಂಡಿತು. ಯಳಜಿತ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಸಂಚಾಲಕರಾದ ಮಂಗೇಶ್ ಶೆಣೈ ಅವರು ಸಹಕಾರಿಯನ್ನು ಉದ್ಘಾಟಿಸಿದರು. ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿಯ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಜುನಾಥ ಎಸ್.ಕೆ, ಉಪಸ್ಥಿತರಿದ್ದರು. ವೇದಿಕೆಯಿಲ್ಲಿ ನಿರ್ದೇಶಕರುಗಳಾದ ಬೀಮೇಶ್ ಕುಮಾರ್ ಎಸ್. ಜಿ, ಬಾಲಕೃಷ್ಣ ಪ್ರಭು, ರಾಜೇಶ್ ಪೈ, ಬಿ. ರಾಜಶ್ರೀ, ಮೋಹಿನಿ ಜಿ. ಶೆಟ್ಟಿ, ಟಿ. ನಾಗರತ್ನಮ್ಮ ಉಪಸ್ಥಿತರಿದ್ದರು.
ನಿವೃತ್ತ ಕಾರ್ಯನಿರ್ವಾಹಕ ಜಗನ್ನಾಥ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಕಾರಿಯ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಕಾರಂತ್ ವಂದಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು.