ಬಿಜೂರು ಮೂರ‍್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕೋತ್ಸವಕ್ಕೆ ಚಾಲನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಪುರಾತನ ಪ್ರಸಿದ್ಧ ಬಿಜೂರು ಮೂರ‍್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಏ.14 ರಿಂದ 16ರ ವರೆಗೆ ನಡೆಯುವ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ವಾರ್ಷಿಕೋತ್ಸವದ ಅಂಗವಾಗಿ ಚಪ್ಪರ ಮೂಹೂರ್ತ ಕಾರ್ಯಕ್ರಮ ನಡೆಯಿತು. ಉಪ್ಪುಂದ ಸಂದೇಶ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ಕೆ ಚಾಲನೆ ನೀಡಲಾಯಿತು.

Call us

Click Here

ಏ.14ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಏ.15ರಂದು ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.15ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಅತಿಥಿ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ನಡೆಯಲಿದ್ದು, ರಾತ್ರಿ ೮ಗಂಟೆಗೆ ಗೆಂಡ ಸೇವೆ ಹಾಗೂ ಮಹಾಮಂಗಳಾರತಿ ನಡೆಯಲಿರುವುದು. ಮೂರು ದಿನದ ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ನಡೆಯಲಿದೆ. ಈ ಸಂದರ್ಭ ದೈವಸ್ಥಾನದ ಅಧ್ಯಕ್ಷ ಕೃಷ್ಣಮೂರ್ತಿ ದೇವಾಡಿಗ ಮತ್ತು ಸಮಿತಿ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply