ಕುಂದಾಪ್ರ ಡಾಟ್ ಕಾಂ ಸುದ್ದಿ
ಶಿರೂರು: ಶಿರೂರು ಕರಾವಳಿ ಸಮೀಪದ ಪಡಿಯಾರಹಿತ್ಲು ಎಂಬಲ್ಲಿ ದನಗಳನ್ನು ಕದ್ದು ಸಾಗಿಸುತ್ತಿದ್ದ ವಾಹನವನ್ನು ಬಂದೂರು ಪೋಲಿಸರು ಶನಿವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ. ಟಾಟಾ ಎಸ್ ವಾಹನದಲ್ಲಿ ೧೨ ಚಿಕ್ಕ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಪೋಲಿಸರನ್ನು ಕಂಡ ತಕ್ಷಣ ಆರೋಪಿಗಳು ವಾಹನವನ್ನು ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾರೆ. ಬಂದೂರು ಪೋಲಿಸರು ವಾಹನವನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.