ವಕ್ವಾಡಿ: ಗುರುಕುಲದ ವಿದ್ಯಾರ್ಥಿ ರಕ್ಷಣ್ ಪ್ರಥಮ ರ‍್ಯಾಂಕ್.

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಸತತ ಪ್ರಯತ್ನ ಮತ್ತು ಕ್ರೀಯಾಶೀಲತೆ ಒಬ್ಬ ವ್ಯಕ್ತಿಯನ್ನು ಉನ್ನತ ಮಟ್ಟ ಏರಲು ಸಹಾಯ ಮಾಡುತ್ತದೆ. ಪ್ರಯತ್ನ ನಿರಂತರವಾಗಿ ನಡೆಯುತ್ತಿರಬೇಕು ಅಲ್ಲದೇ ಅವಕಾಶಗಳು ಸಿಕ್ಕಾಗ ಗುಣಾತ್ಮಕವಾಗಿ ಬಳಸಿಕೊಳ್ಳಬೇಕು ವಿದ್ಯಾರ್ಥಿಗಳು ಇಂತಹ ಗುಣಗಳನ್ನು ತಮ್ಮ ಪ್ರಾಥಮಿಕ ಶಿಕ್ಷಣ ಹಂತದಲ್ಲಿಯೇ ರೂಢಿಸಿಕೊಂಡರೆ, ತಮ್ಮ ಮುಂದಿನ ಜೀವನದಲ್ಲಿ ವಿಶೇಷ ಕೀರ್ತಿಗಳನ್ನು ಸಾಧಿಸಲು ಸಾಧ್ಯವಾಗುತ್ತದೆ. ಇದಕ್ಕೆ ನಿದರ್ಶನವೆಂಬಂತೆ ಗುರುಕುಲ ವಿದ್ಯಾಸಂಸ್ಥೆ ವಕ್ವಾಡಿಯ ೬ನೇ ತರಗತಿಯಲ್ಲಿ ಓದುತ್ತಿರುವ ಕುಮಾರ್ ರಕ್ಷಣ್ ಕುಂದಾಪುರ್ ಉಳಿದ ಎಲ್ಲಾ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾನೆ. ಪ್ರತಿಷ್ಠಿತ ಅಂತರಾಷ್ಟ್ರೀಯ ಒಲಂಪಿಯಾಡ್ ಸಂಸ್ಥೆ ನಡೆಸುವ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶೇಕಡಾ 99.77 ಅಂಕಗಳನ್ನು ಪಡೆದು ಪ್ರಥಮ ರ‍್ಯಾಂಕ್‌ನ್ನು ಪಡೆದನಲ್ಲದೇ , ನವದೆಹಲಿಯಲ್ಲಿ ನಡೆಯುವ ಅಂತಿಮ ಹಂತದ ಪರೀಕ್ಷೆಗೆ ಪೂರ್ವ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾನೆ. ಈ ಪ್ರತಿಷ್ಠಿತ ಸಂಸ್ಥೆಯು ಈ ವಿದ್ಯಾರ್ಥಿಗೆ 15,000/- ರೂಪಾಯಿ ವಿಶೇಷ ಬಹುಮಾನವನ್ನು ನೀಡಿದೆ. ರಾಜ್ಯದಿಂದ ಆಯ್ಕೆಯಾಗುವ 3 ವಿದ್ಯಾರ್ಥಿಗಳಲ್ಲಿ ರಕ್ಷಣ್ ಮೊದಲಿಗನಾಗಿದ್ದಾನೆ. ಈ ಸಾಧನೆಯ ಬಗ್ಗೆ ವಿದ್ಯಾರ್ಥಿಯ ಪಾಲಕರು, ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕ ವೃಂದ ಅಭಿನಂದನೆಯನ್ನು ಸಲ್ಲಿಸಿದೆಯಲ್ಲದೇ ಕೊನೆಯ ಹಂತದ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್‌ನಲ್ಲಿ ತೇರ್ಗಡೆಯಾಗಲು ಬೇಕಾದ ತರಬೇತಿಯನ್ನು ನೀಡಲಾಗುತ್ತಿದೆ.

Call us

Click Here

 

Leave a Reply