ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸರಕಾರದ ಸಚಿವ ಹಾಗೂ ಶಾಸಕರ ದಂಡು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಪ್ರಕರಣಗಳು ನ್ಯಾಯಾಲಯದಲ್ಲಿ ವಜಾ ಆಗಿ ಪುನಃ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವಂತಾಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದೆ.
ಶಾಸಕ ಕೋದಂಡನ್ 67 ಕಾರ್ಯಕರ್ತರೊಂದಿಗೆ ಮೇ 5ರಂದು ಕೊಲ್ಲೂರಿಗೆ ಆಗಮಿಸಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಜಯಲಲಿತಾ ಕೂಡ ಕೊಲ್ಲೂರು ದೇವಿಯ ಭಕ್ತರಾಗಿದ್ದು ಕೆಲವು ವರ್ಷಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದರು.