ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇಲ್ಲಿ ವಾರ್ಷಿಕೋತ್ಸವ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ವಾಣಿಜ್ಯಶಾಸ್ತ್ರ ವಿಬಾಗದ ಮುಖ್ಯಸ್ಥರಾದ ರಘು ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾ. ಉಮೇಶ ಮಯ್ಯ ಹಾಗೂ ಮಾಜಿ ಸೈನಿಕರು ಮತ್ತು ಕಾರ್ಪೋರೇಷನ್ ಬ್ಯಾಂಕ್ ಉದ್ಯೋಗಿಗಳಾದ ಚಂದ್ರಶೇಖರ ನಾವಡ ಬೈಂದೂರು, ಕ್ರೀಡಾ ಸಮಿತಿಯ ಸಂಚಾಲಕರು ಹಾಗೂ ಸಹಪ್ರಾಧ್ಯಾಪಕರಾದ ಶಿವಕುಮಾರ ಪಿ.ವಿ, ನಾಗರಾಜ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಸತೀಶ ಎಂ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ ನವೀನ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರಾದ ಲತಾ ಪೂಜಾರಿ ವರದಿ ವಾಚಿಸಿದರು. ಕ್ರೀಡಾ ಸಂಚಾಲಕರಾದ ಶಿವಕುಮಾರ ಪಿ.ವಿ ವಂದಿಸಿದರು.