ಬೈಂದೂರು ಹಬ್ಬ – ಶ್ರೀ ಸೇನೇಶ್ವರ ಮನ್ಮಹಾ ರಥೋತ್ಸವದ ಸಂಭ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಇಂದು ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರು ರಥೋತ್ಸವದಲ್ಲಿ ಊರ ಪರವೂರ ಸಾವಿರಾರು ಭಕ್ತಸಮೂಹ ಪಾಲ್ಗೊಂಡು ಪುನೀತರಾಗುತ್ತಾರೆ. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯಕ್ಕೆ ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಮಧ್ಯಾಹ್ನ ರಥೋತ್ಸವಕ್ಕೆ ಚಾಲನೆ ನೀಡಿದರೆ, ಸಂಜೆಯ ವೇಳೆಗೆ ರಥವನ್ನು ರಥಬೀದಿಯ ಉದ್ದಕ್ಕೂ ಏಳೆಯಲಾಗುತ್ತದೆ.

Call us

Click Here

ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ.

ರಥೋತ್ಸವದ ಪೂರ್ವದಲ್ಲಿ ಮುಸ್ಲಿಂ ಭಾಂದವರನ್ನು ಆಹ್ವಾನಿಸುವ, ರಥೋತ್ಸವದ ಆರಂಭದಲ್ಲಿ ಬೈಂದೂರಿನ ಪೊಲೀಸ್ ಠಾಣಾಧಿಕಾರಿಯನ್ನು ಕರೆತಂದು ಚಾಲನೆ ದೊರಕಿಸುವ ಸಂಪ್ರದಾಯ ಇಂದಿಗೂ ರೂಢಿಯಲ್ಲಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ನಗರೋತ್ಸವದಲ್ಲಿ ಜಾತಿ ಮತ ಭೇದವಿಲ್ಲದೇ ಎಲ್ಲಾ ಧರ್ಮಿಯರೂ ಪಾಲ್ಗೊಂಡು ಸಂಭ್ರಮಿಸುತ್ತಾರೆ. ರಥೋತ್ಸವದ ಸಮಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತದೆ. ರಥೋತ್ಸವದ ರಾತ್ರಿ ಓಕುಳಿ ಹೊಂಡದ ಆಟ ವಿಶೇಷವಾಗಿ ಜರುಗುತ್ತವೆ.

Click here

Click here

Click here

Click Here

Call us

Call us

 

Leave a Reply