ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎಲ್ಲಾ ಸಮೀಕ್ಷೆಗಳು ಬಿಜೆಪಿ ವಿರುದ್ಧವಾಗಿದ್ದರೂ, ರಾಜ್ಯದಲ್ಲಿ ಅಧಿಕಾರಿ ಹಿಡಿಯುತ್ತೇವೆ ಎಂಬ ಭ್ರಮಾಲೋಕದಲ್ಲಿ ಬಿಜೆಪಿ ನಾಯಕರಿದ್ದಾರೆ. ನಾಲ್ಕು ಬಾರಿ ಕುಂದಾಪುರದಿಂದ ಆಯ್ಕೆಯಾದ ಶಾಸಕರೇ ತನ್ನ ಜವಾಬ್ದಾರಿ ನಿಭಾಯಿಸದೆ ಶಾಸಕರಿಲ್ಲದ ಕ್ಷೇತ್ರಕ್ಕೆ ಮಲ್ಲಿಯಂತಾ ಸಮರ್ಥ ನಾಯಕನ ನಿಲ್ಲಿಸಿದೆ. ಮಾಜಿ ಶಾಸಕರ ಮನೆಯಲ್ಲಿ ಕುರೋದಕ್ಕೆ ಲಾಯ್ಕಾಗಿದ್ದು, ಮಲ್ಲಿ ಶಾಸಕರ ಕರ್ತವ್ಯ ನಿಭಾಯುಸುವ ತಾಕತ್ತಿದ್ದರಿಂದ ಅವರನ್ನು ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ.
ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಕ್ಕೆ ಕಳೆದ ಐದು ವರ್ಷದಲ್ಲಿ ಕೋಟ್ಯಾಂತರ ರೂ. ಅನುದಾನ ತಂದು ಅಭಿವೃದ್ಧಿ ಮಾಡಿದರೆ, ಕುಂದಾಪುರ ಶಾಸಕರು ಮನೆಯಲ್ಲಿ ಕೂತು ಕಲಾಹರಣ ಆಡಿದ್ದು, ಬಿಟ್ಟರೆ ಮತ್ತೇನು ಅಭಿವೃದ್ಧಿ ಮಾಡಿಲ್ಲ ಎಂದು ಆರೋಪಿಸಿದರು.
ಅಭ್ಯರ್ಥಿ ರಾಕೇಶ್ ಮಲ್ಲಿ ಮಾತನಾಡಿ, ಕುಂದಾಪುರ ವಿಧಾನ ಸಭೆ ಅಭಿವೃದ್ಧಿ ನನ್ನ ಕನಸಾಗಿದ್ದು, ಸಮಗ್ರ ಅಭಿವೃದ್ಧಿಗೆ ಒತ್ತು ಕೊಡುತ್ತೇನೆ. ಈ ಬಾರಿ ಮತದಾರರು ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ್ ತೋನ್ಸೆ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, ಚುನಾವಣೆ ಉಸ್ತುವಾರಿ ಜಿ.ಎ.ಬಾವಾ, ಕುಂದಾಪುರ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮೀನುಗಾರಿಕಾ ನಿಗಮ ಮಾಜಿ ಅಧ್ಯಕ್ಷ ಹಿರಿಯಣ್ಣ, ಮಂಜುನಾಥ ಭಂಡಾರಿ, ರೋಶನಿ ಒಲಿವೇರಾ, ಮಾಜಿ ಪುರಸಭಾ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಮಾಜಿ ಜಿಪಂ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ವಿನೋದ್ ಕ್ರಾಸ್ತಾ, ನಾರಾಯಣ ಆಚಾರ್, ಪುರಸಭೆ ಸದಸ್ಯರು, ಜಿಪಂ ತಾಪಂ ಹಾಗೂ ಮುಖಂಡರು ಪಾಲ್ಗೊಂಡಿದ್ದರು.
ಕುಂದಾಪುರ ವಿಧಾನಸಭಾ ಕ್ಷೇತ್ರ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿನಾಮಪತ್ರ ಸಲ್ಲಿಸಿದರು.