ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದುಬೈನಲ್ಲಿ ಉದ್ಯೋಗ ನಿಮಿತ್ತ ನೆಲೆಸಿದ್ದರೂ ಕೂಡ ಮತದಾನ ಮಾಡುವುದು ಕರ್ತವ್ಯ ಹಾಗೂ ಹಕ್ಕು ಎಂಬ ನಿಟ್ಟಿನಲ್ಲಿ ಎಲ್ಲಾ ಚುನಾವಣೆಗೂ ಊರಿಗೆ ಆಗಮಿಸುವ ಪರಿಪಾಠ ಹೊಂದಿದವರು ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ ದುಬೈ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ.
ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಅವರ ಪತ್ನಿ ರೂಪಾಲಿ ಪ್ರವೀಣ್ ಕುಮಾರ್ ಶೆಟ್ಟಿ ಅವರು ವಕ್ವಾಡಿಗೆ ಆಗಮಿಸಿ ಮತದಾನದಲ್ಲಿ ಪಾಲ್ಘೊಂಡರು. ಪ್ರವೀಣ್ ಶೆಟ್ಟಿ ಬೆಳಗ್ಗೆ ವಕ್ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಅವರಿಗೆ ಸ್ನೇಹಿತ ಹಾಗೂ ವಕ್ವಾಡಿ ಮೂಲದ ಬೆಂಗಳೂರು ಉದ್ಯಮಿ ವಿ.ಕೆ. ಮೋಹನ್ ಸಾಥ್ ನೀಡಿದರು.