ಉಪ್ಪುಂದ ಗಾಣಿಗ ಸೇವಾ ಸಂಘದ ವಾರ್ಷಿಕೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಉಪ್ಪುಂದ ಸಮೃದ್ಧ ಸಭಾಭವನದಲ್ಲಿ ಉಪ್ಪುಂದ ಗಾಣಿಗ ಸೇವಾ ಸಂಘದ ಐದನೇ ವರ್ಷದ ವಾರ್ಷಿಕೋತ್ಸವ ಜರುಗಿತು.

Call us

Click Here

ಸಮಾಜದವರ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಉಜಿರೆಯ ಕಾಲೇಜಿನ ಪ್ರಾಂಶುಪಾಲ ಡಾ. ಕೆ. ನಿತ್ಯಾನಂದರವರು ಮಾತನಾಡಿ ಮಾನವೀಯ ಹಾಗೂ ಭಾವನಾತ್ಮಕ ಸಂಬಂಧಗಳ ಕೊರತೆಯ ನಡುವೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಕೌಟುಂಬಿಕ ವ್ಯವಸ್ಥೆಗಳ ಅರಿವು ಮೂಡಿಸುವ ಜತೆಗೆ ಸಂಘಟನೆಯನ್ನು ಬಲಪಡಿಸುವ ಅನಿವಾರ್ಯತೆಯಿದೆ. ಕ್ರೀಯಾತ್ಮಕ ಚಟುವಟಿಕೆಗಳಿಂದ ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಹೇಳಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ರಮೇಶ ಗಾಣಿಗ ಕಾರ್ಯಕ್ರಮ ಉದ್ಘಾಟಿಸಿದರು. ಉಪ್ಪುಂದ ಸಂಘದ ಅಧ್ಯಕ್ಷ ರಾಘವೇಂದ್ರ ಬವಳಾಡಿ ಅಧ್ಯಕ್ಷತೆವಹಿಸಿದ್ದರು. ಕುಂದಾಪುರ ಗಾಣಿಗ ಸಂಘದ ಅಧ್ಯಕ್ಷ ಕೊಗ್ಗ ಗಾಣಿಗ, ಬೈಂದೂರು ಗಾಣಿಗ ಯುವ ಸಂಘಟನೆಯ ಅಧ್ಯಕ್ಷ ಗಣೇಶ, ಉಪಸ್ಥಿತರಿದ್ದರು. ಎಸ್‌ಎಸ್‌ಎಲ್‌ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿನಿ ರಾಘವಿ ಹಾಗೂ ಪಿಯುಸಿಯ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನಿಯಾದ ಲಕ್ಷ್ಮಣ ಗಾಣಿಗ ಇವರಿಗೆ ದಿ. ರಘುರಾಮ ಗಾಣಿಗ ಅಂಬಾಗಿಲು ಇವರ ಸ್ಮರಣಾರ್ಥ ಅವರ ಕುಟುಂಬದವರು ಹಾಗೂ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನಿಯಾದ ಕಿರಣ್ ಗಾಣಿಗ ಇವರನ್ನು ಅನಂತ ಗಾಣಿಗ ಸನ್ಮಾನಿಸಿ ಪುರಸ್ಕರಿಸಿದರು.

ಸಮುದಾಯದ ಎಲ್ಲಾ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ಹಾಗೂ ನೋಟ್ ಬುಕ್ ವಿತರಿಸಲಾಯಿತು. ಕಾರ್ಯದರ್ಶಿ ಗೋಪಾಲಕೃಷ್ಣ ಸ್ವಾಗತಿಸಿದರು. ಕೋಶಾಧಿಕಾರಿ ಅನುಸೂಯ ಗಾಣಿಗ ವಂದಿಸಿದರು ಸುಬ್ರಹ್ಮಣ್ಯ ಜಿ. ನಿರ್ವಹಿಸಿದರು. ಕಾರ್ಯಕ್ರಮದ ನಂತರ ಪ್ರತಿಯೊಬ್ಬರಿಗೂ ಬೆಂಡೆ, ಅವರೆ ಬೀಜಗಳನ್ನು ವಿತರಿಸಲಾಯಿತು.

ಸಮಾಜದಲ್ಲಿ ಜಾಗೃತಿ ಮೂಡಿಸುವುದರರ ಜೊತೆಯಲ್ಲಿ ಸಮುದಾಯವು ಒಗ್ಗಟ್ಟಿನಿಂದ ಸಂಘಟಿತವಾಗಬೇಕಾಗಿದೆ. ಈ ಸಂಘಟನೆ ಯಾರ ವಿರುದ್ದವೂ ಅಲ್ಲ. ಬದಲಾಗಿ ತಮ್ಮತನವನ್ನು ಉಳಿಸಿಕೊಂಡು ಪ್ರತಿಯೊಬ್ಬರೂ ಸ್ವಾಭಿಮಾನಿಯಾಗಿ ಬೆಳೆಯಬೇಕು ಎಂಬ ಭಾವನೆ ಇರಬೇಕು.- ಕೊಲ್ಲೂರು ರಮೇಶ ಗಾಣಿಗ, ಸದಸ್ಯರು ವ್ಯವಸ್ಥಾಪನಾ ಸಮಿತಿ ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು.

Click here

Click here

Click here

Click Here

Call us

Call us

 

Leave a Reply