ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಉಳ್ಳೂರು ಗ್ರಾಮದ ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಶ್ವಕರ್ಮ ಸಮುದಾಯ ನೀಡಿದ ಸನ್ಮಾನ ಸ್ವೀಕರಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿಯವರು ವಿಶ್ವಕರ್ಮರು ನಮ್ಮ ಸಮಾಜದ ಅತ್ಯಂತ ಕ್ರಿಯಾಶೀಲ ಸಮುದಾಯ. ಎಲ್ಲ ವಿಧದ ನಿರ್ಮಾಣ ಕಾರ್ಯಗಳಲ್ಲಿ ಅದರ ಸದಸ್ಯರು ಸಿದ್ಧಹಸ್ತರು. ಈಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ನನ್ನ ಗೆಲುವಿಗೆ ಕೊಡುಗೆ ನೀಡಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವುದಲ್ಲದೆ ಅವರ ಬೇಡಿಕೆಯಾದ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದ ಗರಿಷ್ಠ ಸಾಧ್ಯ ನೆರವು ದೊರಕಿಸಿಕೊಡಲಾಗುವುದು ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.
ದೇವಸ್ಥಾನದ ಮೊಕ್ತೇಸರರಾದ ಮಂಜುನಾಥ ಆಚಾರ್ಯ, ಬಾಬು ಆಚಾರ್ಯ, ಪ್ರಭಾಕರ ಆಚಾರ್ಯ, ಇತರರು ಇದ್ದರು.