ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಗಲ್ಫ್ ರಾಷ್ಟ್ರ ಕತಾರ್‌ನ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಸೋಸಿಯೇಶನ್ (ಕೆಎಂಸಿಎ)ನ 2018-19ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇತ್ತಿಚೆಗೆ ಸಂಘದ ಸಭಾಭವನದಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಇಬ್ರೈಜ್ ಖಾನ್, ಉಪಾಧ್ಯಕ್ಷರಾಗಿ ಇಕ್ಬಾಲ್ ಮನ್ನಾ, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಅಹ್ಮದ್, ಜೊತೆ ಕಾರ್ಯದರ್ಶಿಯಾಗಿ ಝಾಕೀರ್ ಅಹ್ಮದ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಅಬೂಬಕರ್, ಕ್ರೀಡಾ ಕಾರ್ಯದರ್ಶಿಯಾಗಿ ಶಕೀಲ್ ಅಹ್ಮದ್, ಸಲಹೆಗಾರರಾಗಿ ಅಬ್ದುಲ್ಲಾ ಮೋನು ಮೊಯ್ದಿನ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಫಯಾಜ್ ಅಹ್ಮದ್ ಆಯ್ಕೆಯಾಗಿದ್ದಾರೆ.