ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಹಿರಿಯ ಮಹಿಳಾ ಕ್ರೀಡಾಪಟು ಜ್ಯೋತಿ ಶೆಟ್ಟಿ (51) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಉಡುಪಿಯ ಕೊಡವೊರಿನವರಾದ ಜ್ಯೋತಿ ಶೆಟ್ಟಿ ಅವರು ಭಾನುವಾರ ರಾತ್ರಿ ಸಹೋದರನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿನ ಹಂಪ್ ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ತೀವ್ರವಾಗಿ ಗಾಯಗೊಂಡಿದ್ದರು. ಜ್ಯೋತಿಯವರ ತಲೆಯ ಹಿಂಬದಿಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಾಸಿದಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಜ್ಯೋತಿ ಅವರು ಎಸ್ಸೆಸ್ಸೆಲ್ಸಿ ಬಳಿಕ ಶಿಕ್ಷಣವನ್ನು ಮೊಟಕುಗೊಳಿಸಿದ್ದರು. ಮದುವೆಯಾದ ಬಳಿಕ ಮತ್ತೆ ಕ್ರೀಡಾ ಆಸಕ್ತಿ ಮೊಳೆತು, ಅಭ್ಯಾಸದಲ್ಲಿ ತೊಡಗಿದ್ದರು. 2011ರಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದರು. ಹೈಜಂಪ್, ಲಾಂಗ್ ಜಂಪ್, ಶಾಟ್ ಪಟ್, ಓಟ, ಮ್ಯಾರಥಾನ್ನಲ್ಲಿ ಪ್ರಶಸ್ತಿ ಗೆದ್ದಿದ್ದರು. ಸಮಾಜಸೇವೆ ಮೂಲಕವೂ ಗುರುತಿಸಿಕೊಂಡಿದ್ದರು.