ಗಂಗೊಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

Call us

Click Here

ಶಾಲಾ ಮುಖ್ಯ ಶಿಕ್ಷಕಿಯಾದ ಸುಜಾತ ಕೆ. ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ಭಾಷಣ, ನಾಟಕ, ಸ್ಲೋಗನ್ಸ್‌ಗಳನ್ನು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಗಳು ಕುಂಡಗಳಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರದ ಸಂರಕ್ಷಣೆಯಲ್ಲಿ ಗಿಡಗಳ ಮಹತ್ವವನ್ನು ಅರಿತುಕೊಂಡರು.

ಶಾಲಾ ಎಸ್‌ಡಿಎಂಸಿ ಸದಸ್ಯರಾದ ರವಿಶಂಕರ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಮುರಳಿಧರ್ ನಾಯರಿ, ಶಾಲಾ ಶಿಕ್ಷಕರಾದ ಸುಮತಿ ಎಂ., ರಾಜೀವ್ ಶೆಟ್ಟಿ ಬಿ., ಉಮೇಶ್, ಸುಜಾತ, ಸರಿತಾ, ದೀಪಾ, ನಾಗರತ್ನ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿಜ್ಞಾನ ಶಿಕ್ಷಕರುಗಳಾದ ಶಶಿಶಂಕರ್ ಎಚ್. ಎಂ. ಮತ್ತು ಮಂಜುಳಾ ಸಂಯೋಜಿಸಿದ್ದರು. ವಿದ್ಯಾರ್ಥಿಗಳಾದ ಸ್ವಾತಿ, ರುಚಿತಾ, ಲಕ್ಷ್ಮೀ, ನಿಶಾ ಕಾರ್ಯಕ್ರಮವನ್ನು ನಿರ್ವಹಿಸಿದರು.

 

Click here

Click here

Click here

Click Here

Call us

Call us

Leave a Reply