ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬೈಂದೂರು ತಾಲೂಕು ಶ್ರ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಪರಿಸರ ಸಂರಕ್ಷಣೆ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮ ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು.
ಶ್ರ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಪರಿಸರ ಜಾಗೃತಿ ಮತ್ತು ಕಾಳಜಿ ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಆರೋಗ್ಯಕರ ಸಮಾಜದ ಕೊಡುಗೆ ನೀಡಬೇಕಾದರೆ ಇಂದಿನಿಂದಲೇ ಪರಿಸರದ ಸಂರಕ್ಷಣೆಗೆ ಮುಂದಾಗಬೇಕು ಎಂದ ಸದಸ್ಯರಿಗೆ ಸಲಹೆ ನೀಡಿದರು.
ಬೈಂದೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ವೆಂಕಟ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದೂರು ತಹಶೀಲ್ದಾರ ಪುರಂದರ ಹೆಗಡೆ, ವಲಯಾಧ್ಯಕ್ಷ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು.
ಕೃಷಿ ಮೇಲ್ವಿಚಾರಕ ಮಂಜುನಾಥ ಸ್ವಾಗತಿಸಿದರು. ಬಂದೂರು ವಲಯ ಮೇಲ್ವಿಚಾರಕ ಕೆ.ಪಿ ಪ್ರಕಾಶ್ ಕುಮಾರ್ ನಿರ್ವಹಿಸಿದರು. ಜ್ಞಾನ ವಿಕಾಸದ ಸಮನ್ವಯಾಧಿಕಾರಿ ಸುಮತಿ ವಂದಿಸಿದರು.