ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಟ್ನಕಟ್ಟೆ ಕೆರ್ಗಾಲ್ ಇವರಿಂದ ಕಿರಿಮಂಜೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಗಿಡ ಮತ್ತು ಬೀಜದುಂಡೆಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾದ ರಮಾನಂದ ಪ್ರಭು ಅವರು ಮಾತನಾಡುತ್ತಾ ಪ್ರಕೃತಿಯ ಸೌಂದರ್ಯ ಕಾಪಾಡುವಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಗಮನ ಹರಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚಗೊಳಿಸುವುದು ಮಾತ್ರವಲ್ಲ ಪ್ರತಿಯೊಬ್ಬರು ತಮ್ಮ ಮನೆಯ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಪ್ರಕೃತಿಯನ್ನು ತಂಪಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆಕೊಟ್ಟರು. ನಂತರ ವಿನಯ ಚಂದ್ರ ಸಾಸ್ತಾನ ಇವರು ವಿದ್ಯಾರ್ಥಿಗಳಿಗೆ ಬೀಜದುಂಡೆಯನ್ನು ವಿತರಿಸಿ ಪ್ರಕೃತಿಯ ಮಡಿಲಲ್ಲಿ ಗಿಡವನ್ನು ಬೆಳೆಸುವುದರಿಂದ ಭೂಮಿ ತಂಪಾಗುವುದು ಮಾತ್ರವಲ್ಲ ಅಂತರ್ಜಲ ಕುಸಿಯುವುದನ್ನು ತಪ್ಪಿಸಬಹುದು. ಅದರೊಂದಿಗೆ ಪ್ರಕೃತಿಗೆ ಕೊಂಡಿಯಾಗಿರುವ ಪ್ರಾಣಿ ಪಕ್ಷಿಗಳು ಕೂಡಾ ನಮ್ಮೊಂದಿಗೆ ನಿಕಟ ಸಂಬಂಧವನ್ನು ಇಟ್ಟುಕೊಂಡು ಮಾನವೀಯ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳಬಹುದೆಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ಕಾರ್ಯದರ್ಶಿ ಗಣೇಶ್ ಆರ್.ಎಮ್., ಟ್ರಸ್ಟಿಗಳಾದ ಮಹೇಶ್ ಪೂಜಾರಿ, ರಾಜೇಶ್ ಪೂಜಾರಿ, ಮಹೇಂದ್ರ ಪೂಜಾರಿ, ಶಾಲಾ ವಿದ್ಯಾರ್ಥಿಗಳು, ಶಿಕ್ಷಕವೃಂದ ಉಪಸ್ಥಿತರಿದ್ದರು.
ಶಾಲೆ ಮುಖ್ಯೋಪಾಧ್ಯಾಯರಾದ ಶಂಕರ ಮೊಗವೀರರವರು ಸ್ವಾಗತಿಸಿ ವಂದಿಸಿದರು.