ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ರಾಧೇಯ ಎಂ. ಕಾಮತ್ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಮಟ್ಟದಲ್ಲಿ 76ನೇ ರ‍್ಯಾಂಕ್ ಪಡೆದುಕೊಂಡಿರುತ್ತಾನೆ.
ಈತ ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ. ಮೋಹನ ಕಾಮತ್ ಹಾಗೂ ಗಿರೀಜಾ ಎಂ. ಕಾಮತ್‌ರವರ ಸುಪುತ್ರ.
ಇವರ ಸಾಧನೆಗೆ ಕಾಲೇಜಿನ ಅಧ್ಯಕ್ಷರು, ಶಾಸಕರೂ ಆಗಿರುವ ಬಿ.ಎಂ. ಸುಕುಮಾರ ಶೆಟ್ಟಿ ಹಾಗೂ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.