ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪತ್ರಿಕಾ ದಿನಾಚರಣೆಯ ಪ್ರಯುಕ್ತ ಜೆ.ಸಿ.ಐ ಶಿರೂರು ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಈ ಸಂದರ್ಭ ಪತ್ರಕರ್ತ ಅರುಣಕುಮಾರ್ ಶಿರೂರು ಹಾಗೂ ವಿಂದಿಯಾ ದಂಪತಿಗಳನ್ನು, ಪತ್ರಕರ್ತ ಗಿರಿ ಶಿರೂರು ಅವರನ್ನು ಸನ್ಮಾನಿಸಲಾಯಿತು.
ಶಿರೂರು ಜೆ.ಸಿ.ಐ ಅಧ್ಯಕ್ಷ ಪಾಂಡುರಂಗ ಅಳ್ವೆಗದ್ದೆ ಮಾತನಾಡಿ ಸಮಾಜದ ಅಭಿವೃದ್ದಿಯಲ್ಲಿ ಹಾಗೂ ಜನಪರ ಕಾಳಜಿಯಲ್ಲಿ ಪತ್ರಕರ್ತರ ಕೊಡುಗೆ ಅಪಾರವಾಗಿದೆ. ಜೆ.ಸಿ.ಐ ವತಿಯಿಂದ ಇವರ ಸೇವೆಯನ್ನು ಗುರುತಿಸುವ ಸಣ್ಣ ಪ್ರಯತ್ನ ಎಂದರು. ಯಡ್ತರೆ ಗ್ರಾ.ಪಂ ಸದಸ್ಯ ಉದಯ ಮಾಕೋಡಿ, ಜೆಜೆಸಿ ಅಧ್ಯಕ್ಷ ಆದರ್ಶ ಶೇಟ್, ವಿನೋದ ಮೇಸ್ತ, ಕೃಷ್ಣ ಪೂಜಾರಿ ಹಾಜರಿದ್ದರು.