ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಧ್ಯಪ್ರದೇಶದ ಮಾಂಡ್‌ಸರನಲ್ಲಿ ಎಂಟು ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ನಾವುಂದ ನಾವುಂದ ರಿರ್ಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜು ಹಾಗೂ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಕಾಲೇಜಿನಿಂದ ಕಾಲ್ನಡಿಗೆ ಜಾಥಾದ ಮೂಲಕ ನಾವುಂದ ಗ್ರಾಮ ಪಂಚಾಯತ್ ತೆರಳಿ ಅಲ್ಲಿ ಸಭೆ ಸೇರಿದರು. ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಗಲ್ಲು ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರ ಒತ್ತಾಯಿಸಿ ಮನವಿ ಪತ್ರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಹಾಗೂ ಪಂಚಾಯಿತ್ ಅಭಿವೃದ್ಧಿ ಅಧಿಕಾರಿಗೆ ಹಸ್ತಾಂತರಿಸಿದರು.
ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿ ಭಾಗವಹಿಸಿದ್ದರು. ಈ ಸಂದರ್ಭ ಅಹಿತಕರ ಘಟನೆ ನಡೆಯದಂತೆ ಬೈಂದೂರು ವೃತ್ತನೀರಿಕ್ಷಕ ಪರಮೇಶ್ವರ ಆರ್ ಗುನಗ ಹಾಗೂ ಪೊಲೀಸ್ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್. ಬಿಗಿ ಪೊಲೀಸ್ ವ್ಯವಸ್ಥೆ ಮಾಡಿದ್ದರು.