ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ ಬೈಂದೂರು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಧ್ಯಪ್ರದೇಶದ ಮಾಂಡ್ಸರನಲ್ಲಿ ಎಂಟು ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Call us

Click Here

ಕಾಲೇಜಿನಿಂದ ಕಾಲ್ನಡಿಗೆ ಜಾಥಾದ ಮೂಲಕ ಬೈಂದೂರು ತಹಶೀಲ್ದಾರರ ಕಛೇರಿ ಹಾಗೂ ಪೊಲೀಸ್ ಠಾಣೆಗೆ ತೆರಳಿದ ವಿದ್ಯಾರ್ಥಿಗಳು ಮನವಿ ಹಸ್ತಾಂತರಿಸಿದರು. ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಗಲ್ಲು ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು..

ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿ ಭಾಗವಹಿಸಿದ್ದರು. ಈ ಸಂದರ್ಭ ಬೈಂದೂರು ಪೊಲೀಸ್ ವೃತ್ತನೀರಿಕ್ಷಕ ಪರಮೇಶ್ವರ ಆರ್ ಗುನಗ ಹಾಗೂ ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್. ಬಿಗಿ ಪೊಲೀಸ್ ವ್ಯವಸ್ಥೆ ಮಾಡಿದ್ದರು.

Leave a Reply