Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಂದೆ ತಾಯಿಯರ ಸೇವೆ ಮಾಡುವುದು ದೇವರ ಸೇವೆ ಮಾಡಿದಷ್ಟು ಪುಣ್ಯ: ರಿತೇಶ್ ಕಾಮತ್
    ಊರ್ಮನೆ ಸಮಾಚಾರ

    ತಂದೆ ತಾಯಿಯರ ಸೇವೆ ಮಾಡುವುದು ದೇವರ ಸೇವೆ ಮಾಡಿದಷ್ಟು ಪುಣ್ಯ: ರಿತೇಶ್ ಕಾಮತ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ದೇವರು ನಮ್ಮನ್ನು ಈ ಪುಣ್ಯಭೂಮಿಯಲ್ಲಿ ಹುಟ್ಟಿಸಬೇಕಾದರೆ ನಮಗೆ ದೈನಂದಿನ ಚಟುವಟಿಕೆಗಳನ್ನು ನಡೆಸಲು ಬೇಕಾದ ಎಲ್ಲಾ ಅಂಗಾಂಗಗಳನ್ನು ಸೃಷ್ಟಿಸಿದ್ದಾನೆ. ನಮಗೆ ಈ ಸುಂದರ ಮಾಯಾ ಜೀವನ ಕೊಟ್ಟಿದ್ದು ತಂದೆ ತಾಯಿ. ಅವರೇ ನಮ್ಮ ನಿಜವಾದ ದೇವರು, ತಂದೆ ತಾಯಿ ನಮ್ಮ ಜೀವನದ ಹೀರೋಗಳು. ಹೀಗಾಗಿ ನಾವು ಪ್ರತಿನಿತ್ಯ ತಂದೆ ತಾಯಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆದುಕೊಳ್ಳಬೇಕು. ಇದರಿಂದ ನಮ್ಮ ಜೀವನ ಅಭಿವೃದ್ಧಿಯಾಗಿ ಸಮಾಜದಲ್ಲಿ ಉನ್ನತ ಸ್ಥಾನ ದೊರೆಯಲು ಸಹಾಯವಾಗುತ್ತದೆ ಎಂದು ಕುಂದಾಪುರ ಸರಸ್ವತಿ ಗ್ರೂಫ್ ಆಫ್ ಇನ್ಸಿಟ್ಯೂಟ್‌ನ ಆಡಳಿತ ನಿರ್ದೇಶಕ ರಿತೇಶ್ ಕಾಮತ್ ಹೇಳಿದರು.

    Click Here

    Call us

    Click Here

    ಕ್ರಾಂತಿವೀರರ ಅಭಿಮಾನಿ ಬಳಗ ಗಂಗೊಳ್ಳಿ ಹಾಗೂ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಕಾರದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಜನ್ಮದಾತೋ ದೇವೋ ಭವ: ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ತಂದೆ ತಾಯಿ ನಮ್ಮನ್ನು ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿ ಉತ್ತಮ ವಿದ್ಯಾಭ್ಯಾಸ ನೀಡಿ ಅವರು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಬೇಕು ಎಂದು ಶ್ರಮಪಟ್ಟಿರುತ್ತಾರೆ. ಅವರ ಇಳಿ ವಯಸ್ಸಿನಲ್ಲಿ ನಾವು ನಮ್ಮ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಿಗೆ ಸೇರಿಸದೆ ಅವರನ್ನು ಮಕ್ಕಳಂತೆ ಅವರ ಆರೈಕೆ ಮಾಡಬೇಕು. ಅವರ ಸೇವೆ ಮಾಡಿದರೆ ದೇವರ ಸೇವೆ ಮಾಡಿದಷ್ಟು ಪುಣ್ಯ ದೊರೆಯುತ್ತದೆ ಎಂದು ಅವರು ಹೇಳಿದರು.

    ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಕೆ.ಸದಾನಂದ ವೈದ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ಗ್ರೂಫ್ ಆಫ್ ಇನ್ಸಿಟ್ಯೂಟ್‌ನ ಆಡಳಿತ ನಿರ್ದೇಶಕಿ ಸ್ನೇಹಾ ಕಾಮತ್ ಶುಭ ಹಾರೈಸಿದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಅಧ್ಯಕ್ಷ ರಾಜಗೋಪಾಲ ಶೇರುಗಾರ್, ಕ್ರಾಂತಿವೀರರ ಅಭಿಮಾನಿ ಬಳಗದ ಮಹೇಶ ಖಾರ್ವಿ ಉಪಸ್ಥಿತರಿದ್ದರು.

    ಶಾಲೆಯ ಆಡಳಿತ ಮಂಡಳಿ ಸದಸ್ಯ ಕೆ.ರಾಮನಾಥ ನಾಯಕ್ ಸ್ವಾಗತಿಸಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ.ವಿಠಲ ಶೆಣೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಜಿ ಅಧ್ಯಕ್ಷ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಗಣೇಶ ಕಿಣಿ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026

    ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ

    06/07/2026
    Leave A Reply Cancel Reply

    14 + thirteen =

    Call us

    Click Here

    Call us

    Call us

    Call us
    Highest Viewed Recently
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.