ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯು ತನ್ನ ೨೫ ನೇ ವರ್ಷಾಚರಣೆಯ ಸಂದರ್ಭದಲ್ಲಿ ಬೆಳ್ಳಿಹಬ್ಬದ ಉದ್ಘಾಟನಾ ಸಮಾರಂಭ ಹಮ್ಮಿಕೊಂಡಿದ್ದು, ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬೆಳ್ಳಿಹಬ್ಬದ ಲಾಂಛನವನ್ನು ಬಿಡುಗೊಡೆಗೊಳಿಸಿ, ಮಾತನಾಡಿದ ಅವರು ಕಿರಿಮಂಜೇಶ್ವರದಲ್ಲಿ ಹಿಂದೆ ಸಣ್ಣ ಹಂಚಿನ ಕಟ್ಟಡದಲ್ಲಿ ಶಾಲೆಯನ್ನು ಆರಂಭಿಸಿ ಇಂದು ತನ್ನದೇ ಆದ ಸುಸಜ್ಜಿತ ಸ್ವಂತ ಕಟ್ಟಡದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ಡಾ| ಎನ್ ಕೆ ಬಿಲ್ಲವ ಅವರ ವ್ಯಕ್ತಿತ್ವವನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ನೂತನ ಶಾಸಕರನ್ನು ಸನ್ಮಾನಿಸಲಾಯಿತು. ಕ್ಲಸ್ಟ್‌ರ್ ಮಟ್ಟದಲ್ಲಿ ಪ್ರತಿಭಾ ಕಾರಂಜಿ ವಿಜೇತರಾದ ಪುಟಾಣಿಗಳನ್ನು ಪ್ರಶಸ್ತಿಯೊಂದಿಗೆ ಪುರಸ್ಕರಿಸಲಾಯಿತು.
ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ಎನ್ ಕೆ ಬಿಲ್ಲವ ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ ೨೫ ವರ್ಷಗಳ ಏಳು-ಬೀಳುಗಳನ್ನು ಸ್ಮರಿಸುತ್ತಾ ಮುಂದಿನ ದಿನಗಳಲ್ಲಿ ಇನ್ನೂ ಅತುತ್ತಮ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಭರವಸೆ ನೀಡಿದರು.
ಮುಖ್ಯ ಶಿಕ್ಷಕರಾದ ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಸಮಾರಂಭದಲ್ಲಿ ಆಡಳಿತ ನಿರ್ದೇಶಕ ಕೆ ಪುಂಡಲೀಕ ನಾಯಕ್, ಶಾಲೆಯ ಸಂಚಾಲಕ ಶಂಕರ ಎಸ್ ಪೂಜಾರಿ, ಟ್ರಸ್ಟಿಯಾದ ತೆಜಪ್ಪ ಶೆಟ್ಟಿ, ಸಲಹಾ ಸಮಿತಿ ಸದಸ್ಯರಾದ ಶೇಖರ ಪೂಜಾರಿ, ರಾಜೀವ್ ಶೆಟ್ಟಿ, ಶುಭ ಪೂಜಾರಿ, ಸತೀಶ್ ಪೂಜಾರಿ, ಉದಯ ಪೂಜಾರಿ, ಶಾಲೆಯ ಸಂಯೋಜಕಿ ಗೀತಾದೇವಿ ಅಡಿಗ ಮತ್ತು ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶಾಲಿನಿ ಸ್ವಾಗತಿಸಿ, ರಮ್ಯಾ ವಂದಿಸಿದರು. ಆಯಿಶಾ ಕಾರ್ಯಕ್ರಮ ನಿರ್ವಹಿಸಿದರು.