ಗಂಗೊಳ್ಳಿಯ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ವೃತ ಆಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಹಾಗೂ ಮಹಿಳಾ ಮಂಡಳಿ ಆಶ್ರಯದಲ್ಲಿ ಗಂಗೊಳ್ಳಿಯ ಶಾರದಾ ಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವು ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ಜರಗಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಅನುಷ್ಠಾನಗಳು ಜರಗಿತು. ಪುರೋಹಿತರಾದ ವೇದಮೂರ್ತಿ ಜಿ.ನಾರಾಯಣ ಆಚಾರ್ಯ, ಮಹಿಳಾ ಮಂಡಳಿಯ ಪದಾಧಿಕಾರಿಗಳು, ಶ್ರೀ ಶಾರದೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Call us

Click Here

ಗಂಗೊಳ್ಳಿಯ ಶ್ರೀ ಚಕ್ರೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವು ಭಕ್ತಿ ಶ್ರದ್ಧೆಯಿಂದ ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು.

ಗಂಗೊಳ್ಳಿಯ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಿಳಾ ಮಂಡಳಿ ವತಿಯಿಂದ ೨೮ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತವು ಭಕ್ತಿ ಶ್ರದ್ಧೆಯಿಂದ ಶುಕ್ರವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು.

ಬೆಳಿಗ್ಗೆ ೮ ಗಂಟೆಗೆ ದೇವತಾ ಪ್ರಾರ್ಥನೆ, ಕಲಶ ಪ್ರತಿಷ್ಠಾಪನೆ, ಕಲ್ಪೋಕ್ತ ಪೂಜೆ, ಕಥಾಶ್ರವಣ, ೧೧ ಗಂಟೆಗೆ ಮಂಗಳಾರತಿ, ಸುವಾಸಿನೀ ಬ್ರಾಹ್ಮಣ ಆರಾಧನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಪುರೋಹಿತರಾದ ವೇದಮೂರ್ತಿ ಜಿ.ವಸಂತ ಭಟ್ ಮತ್ತು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಜರಗಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಪದಾಧಿಕಾರಿಗಳು, ಊರಿನ ಹತ್ತು ಸಮಸ್ತರು ಮತ್ತು ಸಮಾಜಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.

ಗಂಗೊಳ್ಳಿಯ ವರಮಹಾಲಕ್ಷ್ಮೀ ವೃತಾಚರಣೆ ಸಮಿತಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತವು ಗಂಗೊಳ್ಳಿಯ ಕಲೈಕಾರ ಮಠ ಶ್ರೀ ನಗರ ಮಹಾಂಕಾಳಿ ಕಲ್ಲುಕುಟ್ಟಿಗ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು. ದೇವಸ್ಥಾನದ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಗಂಗೊಳ್ಳಿಯ ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯು ಪುರೋಹಿತರಾದ ವೇದಮೂರ್ತಿ ಜಿ.ವೀರೇಶ ಭಟ್ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು.

Leave a Reply