ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು 2017-18ನೇ ಸಾಲಿನಲ್ಲಿ 141.17 ಕೋಟಿಯಷ್ಟು ವ್ಯವಹಾರ ನಡೆಸಿ 75.01 ಲಕ್ಷ ರೂ. ಲಾಭಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ ಶೇ.13ರಷ್ಟು ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು.
ಅವರು ಶುಕ್ರವಾರ ಬೈಂದೂರಿನ ಪ್ರಧಾನ ಕಛೇರಿಯಲ್ಲಿ ಜರುಗಿದ 16ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಆರ್ಥಿಕ ವರ್ಷದ ಅಂತ್ಯಕ್ಕೆ ಸಂಘವು 63.23 ಕೊಟಿ ರೂ. ಠೇವಣಿ ಸಂಗ್ರಹಿಸಿ, 25.24 ಕೋಟಿ ರೂ. ಸಾಲ ನೀಡಿ ಒಟ್ಟು 141.17 ಕೋಟಿ ರೂ. ವಹಿವಾಟು ನಡೆಸಿದೆ ಎಂದ ಅವರು ಪ್ರಧಾನ ಕಛೇರಿ ಹಾಗೂ ಐದು ಶಾಖೆಗಳನ್ನು ಹೊಂದಿ ಉತ್ತಮ ವ್ಯವಹಾರ ನಡೆಸುತ್ತಿದೆ. ಪ್ರತಿವರ್ಷ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಈ ಸಂದರ್ಭ ಸಂಸ್ಥೆಯ ನಿರ್ದೇಶಕರಾದ ಕೆ. ಶಂಕರ ಪೂಜಾರಿ, ಕೆ. ಶ್ರೀನಿವಾಸ ಪೂಜಾರಿ, ಚಿಕ್ಕು ಪೂಜಾರಿ, ಎನ್. ಅಣ್ಣಪ್ಪ ಬಿಲ್ಲವ, ಜಯಸೂರ್ಯ ಪೂಜಾರಿ, ಕಲ್ಪನಾ ಬಿ. ಪೂಜಾರಿ, ಪುಟ್ಟ ಎಂ. ಬಿಲ್ಲವ, ಶೇಖರ ಪೂಜಾರಿ, ಯು. ಕೇಶವ ಪೂಜಾರಿ, ಉದಯ ಜಿ. ಪೂಜಾರಿ ಉಪಸ್ಥಿತಿತರಿದ್ದರು.
ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಿಸಲಾಯಿತು.
ಸಂಘದ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕುಷ್ಠ ಬಿಲ್ಲವ ವಾರ್ಷಿಕ ವರದಿ ವಾಚಿಸಿದರು, ವಂದಿಸಿದರು.