ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕುಂದಾಪುರ ಪುರಸಭೆಯ 23 ವಾರ್ಡುಗಳ ಪೈಕಿ 14 ವಾರ್ಡುಗಳನ್ನು ಭಾರತೀಯ ಜನತಾ ಪಾರ್ಟಿ, 8 ವಾರ್ಡುಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹಾಗೂ 1 ವಾರ್ಡ್‌ನ್ನು ಪಕ್ಷೇತರ ಅಭ್ಯರ್ಥಿ ಗೆದ್ದುಕೊಂಡು, ಬಿಜೆಪಿ ದೊಡ್ಡ ಪಕ್ಷವಾಗಿ ಬೀಗಿದೆ.
ಇಂದು ಬೆಳಿಗ್ಗೆ ಕುಂದಾಪುರದಲ್ಲಿ ನಡೆದ ಮತ ಎಣಿಕೆ ಕೇಂದ್ರದ ಬಳಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರು ಪಕ್ಷದ ಗೆಲುವಿನ ಸೂಚನೆ ದೊರೆಯುತ್ತಿದ್ದಂತೆ ಸಂಭ್ರಮಿಸಿದರು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೆದ್ದ ಅಭ್ಯರ್ಥಿಗಳೊಂದಿಗೆ ವಿಜಯೋತ್ಸವ ಆಚರಿಸಿದರು.











