ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾದಕ ವ್ಯಸನಕ್ಕೆ ಒಳಗಾಗಿರುವ ವ್ಯಕ್ತಿಗಳು ಸಮಾಜಕ್ಕೆ ಮಾರಕ. ಹಾಗಾಗಿ ಮಾದಕದ್ರವ್ಯದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಮತ್ತು ಮಾದಕ ದ್ರವ್ಯಗಳ ಬಳಕೆಯ ಬಗ್ಗೆ ಪೊಲೀಸರ ಗಮನಕ್ಕೆ ತಂದು ಅದರ ನಿರ್ನಾಮಕ್ಕೆ ಸಹಕರಿಸುವುದು ಅಗತ್ಯ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಹೇಳಿದರು.
ಅವರು ಉಡುಪಿ ಜಿಲ್ಲಾ ಪೊಲೀಸ್, ಕುಂದಾಪುರ ಪೊಲೀಸ್ ಠಾಣೆ ಹಾಗೂ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ ಅಶ್ರಯದಲ್ಲಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡ ’ವಾಕಾಥಾನ್’ಗೆ ಚಾಲನೆ ನೀಡಿ ಮಾತನಾಡಿದರು.
ಕುಂದಾಪುರ ಡಿವೈಎಸ್ಪಿ ಬಿ.ಪಿ ದಿನೇಶ್ ಕುಮಾರ್, ಲಯನ್ಸ್ ಕ್ಲಬ್‌ನ ಡಾ. ಶಿವಕುಮಾರ್, ನವಿನ್‌ಕುಮಾರ್ ಶೆಟ್ಟಿ, ಕುಂದಾಪುರ ಎಸೈ ಹರೀಶ್ ಆರ್, ಕಂಡ್ಲೂರು ಎಸೈ ಶ್ರೀಧರ್, ಬೈಂದೂರು ಎಸೈ ತಿಮ್ಮೇಶ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ತಾಲೂಕು ಅಧ್ಯಕ್ಷ ಶಶಿಧರ ಹೆಮ್ಮಾಡಿ, ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಭಂಡಾರ್‌ಕಾರ‍್ಸ್ ಕಾಲೇಜಿನ ಎಸ್‌ಸಿಸಿ ಆಫೀಸರ್‌ಗಳಾದ ಅಂಜನ್‌ಕುಮಾರ್, ಶರಣ್ ಮೊದಲಾದವರು ಉಪಸ್ಥಿತರಿದ್ದರು.
ಎಸ್‌ಸಿಸಿ ವಿದ್ಯಾರ್ಥಿಗಳು, ಪೊಲೀಸರು ಹಾಗೂ ಪತ್ರಕರ್ತರು ವಾಕಾಥಾನ್ ಜಾಥಾ ಕುಂದಾಪುರ ಶಾಸ್ತ್ರೀ ವೃತ್ತದಿಂದ ಆರಂಭಗೊಂಡು ಹೊಸ ಬಸ್ ನಿಲ್ದಾಣ ಸುತ್ತಿ ಮರಳಿ ಶಾಸ್ತ್ರೀವೃತ್ತದಲ್ಲಿ ಸಮಾಪನಗೊಂಡಿತು.