ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕಾಳವಾರದಲ್ಲಿ ಬೈಕ್ ಸವಾರನ ಮೇಲೆ ಕಾರು ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಾಲಾಡಿ ನಿವಾಸಿ ರುದ್ರ ಆಚಾರ್ ಅವರ ಮಗ ಗಂಗಾಧರ ಆಚಾರ್ (೩೪) ಮೃತ ದುರ್ದೈವಿ.
ಕೋಟೇಶ್ವರ ಹಾಲಾಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಕಾಳವಾರ ಸಮೀಪ ಹಾವು ಬಂತೆಂದು ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರ ಕಾರಿಗೆ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದರು. ಇದೇ ವೇಳೆ ಬೈಕ್ ಹಿಂದಿನಿಂದ ಬಂದ ಮತ್ತೊಂದು ಕಾರು ಬೈಕ್ ಸವಾರನ ಗಂಗಾಧರ ಅವರ ಮೇಲೆ ಹರಿದಿದ್ದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿ ಮಹಜರು ನಡೆಸಿದ್ದಾರೆ.