ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸ್ಥಳಾಂತರಗೊಂಡ ಕುಂದಾಪುರ ಶಾಖೆಯು ಮುಖ್ಯರಸ್ತೆಯ ಅಥರ್ವ ಕಾಂಪೆಕ್ಸ್ ಮೊದಲ ಮಹಡಿಯಲ್ಲಿ ಸುಸಜ್ಜಿತ ಹವಾನಿಯಂತ್ರಿತ ಕೊಠಡಿ ಉದ್ಘಾಟನೆಗೊಂಡಿತು.
ಶಾಖೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಸ್.ದಿನಕರ ಶೆಟ್ಟಿ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘ ಅಧ್ಯಕ್ಷ ಹೆಚ್. ಹರಿಪ್ರಸಾದ್ ಶೆಟ್ಟಿ, ಸಹಕಾರಿ ಸಂಘಗಳ ಉಪ ನಿಬಂಧಕಿ ಚಂದ್ರಪ್ರತಿಮಾ ಎಂ. ಜಿ, ಕುಂದಾಪುರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಕೃಷ್ಣಮೂರ್ತಿ, ಎಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ ಶೆಟ್ಟಿ, ಬಿ.ರಘುರಾಮ ಶೆಟ್ಟಿ, ಶಶಿಕುಮಾರ್ ರೈ, ಪ್ರಭಾರ ಮುಖ್ಯಕಾರ‍್ಯನಿರ್ವಹಣಾಧಿಕಾರಿ ಬಿ. ರವೀಂದ್ರ ಇದ್ದರು.
ಕಟ್ಟಡ ಮಾಲೀಕ ಗಶೇಶ್ ನಾಯಕ್ ಹಾಗೂ ಶಾಖಾ ವ್ಯವಸ್ಥಾಪಕ ಮೋಹನ್ ದಾಸ್ ಹೆಬ್ಬಾರ್ ಅವರ ಡಾ.ರಾಜೇಂದ್ರ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಸನ್ಮಾನಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ವರ್ಷಾ ಪ್ರಾರ್ಥಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು.